Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರೈಲ್ವೆ ಬಡ್ತಿ...

ಯಾದಗಿರಿ | ರೈಲ್ವೆ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ನಿರ್ಲಕ್ಷ್ಯ ನಿಲ್ಲಿಸಬೇಕು: ಕರವೇ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Feb 2026 12:15 AM IST
share
ಯಾದಗಿರಿ | ರೈಲ್ವೆ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ನಿರ್ಲಕ್ಷ್ಯ ನಿಲ್ಲಿಸಬೇಕು: ಕರವೇ ಆಗ್ರಹ

ಯಾದಗಿರಿ : 2012ರಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ರೈಲ್ವೆ ಇಲಾಖೆಯಲ್ಲಿ ನೌಕರಿಗೆ ಸೇರಿದ ಸಿಬ್ಬಂದಿಯ ಬಡ್ತಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ಘೋರ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ಎನ್.ಭೀಮುನಾಯಕ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಬೇರೆ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ನೀಡಿದ್ದರೂ ಕನ್ನಡಕ್ಕೆ ಮಾತ್ರ ತಾತ್ಸಾರ ತೋರಿಸಲಾಗುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರವೇ ವತಿಯಿಂದ ಈ ಹಿಂದೆ ಹಲವು ಬಾರಿ ಹೋರಾಟ ನಡೆಸಿದರೂ, ಆಗ ನೀಡಿದ ಭರವಸೆಗಳು ಇನ್ನೂ ಭರವಸೆಯಲ್ಲಿಯೇ ಉಳಿದಿವೆ. ಕನ್ನಡದಲ್ಲಿ ಪರೀಕ್ಷೆ ಬರೆದು ನೌಕರಿ ಪಡೆದ ಸಿಬ್ಬಂದಿಗೆ ಬಡ್ತಿ ಪರೀಕ್ಷೆಯನ್ನು ಮಾತ್ರ ಆಂಗ್ಲ ಅಥವಾ ಹಿಂದಿಯಲ್ಲಿ ಬರೆಯಬೇಕೆಂಬ ಹೇರಿಕೆ ಮಾಡಿರುವುದು ರೈಲ್ವೆ ಇಲಾಖೆಯ ಕುಚೋದ್ಯದ ಕ್ರಮ ಎಂದು ಟೀಕಿಸಿದರು.

ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನೇಮಕಾತಿ ಅಧಿಸೂಚನೆಯಲ್ಲಿ ಕನ್ನಡದಲ್ಲೂ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಿಸಿ, ನಂತರ ಅದನ್ನು ಹಿಂಪಡೆದು ಪರೀಕ್ಷೆ ನಡೆಸಿರುವುದು ನಾಚಿಕೆಗೇಡು ಸಂಗತಿ ಎಂದು ಅವರು ಹೇಳಿದರು.

ಇದಕ್ಕೆ ಇಲಾಖೆ ನೀಡುತ್ತಿರುವ “ಕಂಪ್ಯೂಟರ್ ವ್ಯವಸ್ಥೆ ಇಲ್ಲ” ಎಂಬ ಕಾರಣ ಬಾಲಿಷ ಹಾಗೂ ಕೇವಲ ಸಬೂಬು ಮಾತ್ರ ಎಂದು ಆರೋಪಿಸಿದರು. ಇಂತಹ ಕಾರಣಗಳನ್ನು ಬಿಟ್ಟು ಕೂಡಲೇ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪದೇಪದೇ ನಡೆಯುತ್ತಿರುವ ಈ ಅನ್ಯಾಯದ ಬಗ್ಗೆ ರಾಜ್ಯದ ಸಂಸದರು, ಕೇಂದ್ರ ಸಚಿವರು ಗಂಭೀರವಾಗಿ ಗಮನ ಹರಿಸಬೇಕು. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಬೇಕು ಎಂದು ಮನವಿ ಮಾಡಿದರು.

ಕನ್ನಡದಲ್ಲಿ ಪರೀಕ್ಷೆ ಬರೆದು ಹುದ್ದೆ ಪಡೆದು 14 ವರ್ಷಗಳು ಕಳೆದರೂ ಬಡ್ತಿ ಪರೀಕ್ಷೆಗಳು ಕನ್ನಡದಲ್ಲಿ ನಡೆಯದಿರುವುದು ಅತ್ಯಂತ ನಾಚಿಕೆಗೇಡು ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸದಿದ್ದರೆ ಹೋರಾಟ ತೀವ್ರಗೊಳಿಸಿ ರೈಲ್ವೆ ಇಲಾಖೆ ಪರೀಕ್ಷೆಗಳಿಗೆ ಅಡ್ಡಿಪಡಿಸುವ ಹೋರಾಟ ನಡೆಸಲಾಗುವುದು ಎಂದು ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ವಿಶ್ವಾರಾಜ ಪಾಟೀಲ್ ಹಾಗೂ ಪ್ರಕಾಶ ಪಾಟೀಲ್ ಜೈಗ್ರಾಮ್ ಎಚ್ಚರಿಕೆ ನೀಡಿದ್ದಾರೆ.

Tags

Kannadayadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X