ಯಾದಗಿರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ : ಪೋಕ್ಸೋ ಕಾಯ್ದೆಯಡಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ವಸತಿ ನಿಲಯವೊಂದರ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ನಿಲಯದ ಪ್ರಾಚಾರ್ಯ, ವಾರ್ಡನ್, ತರಗತಿ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಸೇರಿ ಒಟ್ಟು 4 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನರ ಮೇಲೆ ಬಿ.ಎನ್.ಎಸ್ ಕಾಯ್ದೆ ಕಲಂ 64, ಪೋಕ್ಸೋ ಕಾಯ್ದೆ ಕಲಂ 4,6,19, ಹಾಗೂ ಬಾಲ ನ್ಯಾಯ ಕಾಯ್ದೆ- 2015ರ ಕಲಂ 33, 34 ರಡಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾದ ನಿರ್ಮಲಾ ಎಚ್.ಸುರಪುರ ಅವರು ಪ್ರಕರಣ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





