Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿದ್ಯಾರ್ಥಿಗಳು...

ಯಾದಗಿರಿ | ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ : ಮುದ್ನಾಳ್

ವಾರ್ತಾಭಾರತಿವಾರ್ತಾಭಾರತಿ10 March 2026 11:23 PM IST
share
ಯಾದಗಿರಿ | ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ : ಮುದ್ನಾಳ್
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ

ಯಾದಗಿರಿ: ಹತ್ತನೇ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ತಿರುವು ತರುವ ಹಂತವಾಗಿದ್ದು, ಅವರ ಭವಿಷ್ಯ ರೂಪಿಸುವ ಪ್ರಮುಖ ಘಟ್ಟವಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಹೇಳಿದರು.

ನಗರದ ಎಂಆರ್‌ಎಂ ಪ್ರೌಢ ಶಾಲೆಯ ಆವರಣದಲ್ಲಿ ಸ್ಪರ್ಶ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಬೇಕು. ಪರೀಕ್ಷೆಯನ್ನು ಸವಾಲಾಗಿ ಭಯಪಡುವ ಬದಲು ಶಾಂತ ಮನೋಭಾವದಿಂದ ಸಿದ್ಧತೆ ನಡೆಸಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ವೇಳೆ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆನ್ನಬಸಪ್ಪ ಮುದೋಳ್, ಹತ್ತನೇ ತರಗತಿ ವಿದ್ಯಾರ್ಥಿಗಳು ಕನಿಷ್ಠ 20 ಅಂಕಗಳನ್ನು ಪಡೆದರೂ ಉತ್ತೀರ್ಣರಾಗಬಹುದು ಎಂದು ತಿಳಿಸಿ ಪರೀಕ್ಷೆಯ ಭಯವನ್ನು ದೂರ ಮಾಡುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಪರೀಕ್ಷಾ ಸಿದ್ಧತೆಗೆ ರಾಜ್ಯ ಮಟ್ಟದ ಮಾದರಿ ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿದ್ದು, ಮೂರು ಹಂತದ ಮಾದರಿ ಪರೀಕ್ಷೆಗಳು ಈಗಾಗಲೇ ನಡೆದಿವೆ. ಶೇಕಡಾ 60ರಷ್ಟು ಶಾಲೆಗಳಲ್ಲಿ ರಾತ್ರಿ ವಿದ್ಯಾಭ್ಯಾಸ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ “ತೆರೆದ ಗ್ರಂಥಾಲಯ” ಯೋಜನೆಯಡಿ ವಿದ್ಯಾರ್ಥಿಗಳಿಗೆ ಓದಲು ಅನುಕೂಲವಾಗುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂಆರ್‌ಎಂ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ಯಾಡ್, ಪೆನ್, ಕಂಪಾಸ್ ಬಾಕ್ಸ್ ಸೇರಿದಂತೆ ವಿವಿಧ ಪರೀಕ್ಷಾ ಸಾಮಗ್ರಿಗಳನ್ನು ಸ್ಪರ್ಶ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಎಸ್.ಹೊಟ್ಟಿ, ಉದ್ಯಮಿಗಳಾದ ಪ್ರಶಾಂತ ಆಯರಕರ್, ಮುಖ್ಯ ಗುರುಗಳಾದ ಶರಣಗೌಡ ಬಿಮನಹಳ್ಳಿ, ನೂರಂದಪ್ಪ ಲೇವಡಿ, ನಾಗೇಂದ್ರ ಜಾಜಿ, ಸಾಬಣ್ಣ, ಚನ್ನವೀರಯ್ಯ ಸ್ವಾಮಿ, ಮಹೇಶ ಮಲ್ಲು ಹಳಕಟ್ಟಿ ಇದ್ದರು.

Tags

studentyadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X