Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕೃಷ್ಣ, ಭೀಮಾ ನದಿಗಳ ಪ್ರವಾಹ...

ಯಾದಗಿರಿ | ಕೃಷ್ಣ, ಭೀಮಾ ನದಿಗಳ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಳ್ಳಿ : ಡಿಸಿ ಹರ್ಷಲ್ ಭೋಯರ್

ವಾರ್ತಾಭಾರತಿವಾರ್ತಾಭಾರತಿ21 Aug 2025 6:13 PM IST
share
ಯಾದಗಿರಿ | ಕೃಷ್ಣ, ಭೀಮಾ ನದಿಗಳ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಳ್ಳಿ : ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಕೃಷ್ಣ ಹಾಗೂ ಭೀಮಾ ನದಿ ತೀರದ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸನ್ನದ್ಧಗೊಂಡಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದರು.

ಕೆಸ್ವಾನ್ ಮೂಲಕ ಇಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಈ ನದಿಗಳ ಪಾತ್ರದ ಜನರಲ್ಲಿ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ನದಿ ಪಾತ್ರದ ಹಾಗೂ ಜಿಲ್ಲೆಯ ನಾಗರಿಕರಿಗೆ ಸಮಸ್ಯೆ ಬಂದಲ್ಲಿ ಸಂಪರ್ಕಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ತೊಂದರೆಯಾಗದಂತೆ ನಿಗಾವಹಿಸಬೇಕು. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಯಾವುದೇ ಸಂದರ್ಭದಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಿರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷ್ಣಾ ಮತ್ತು ಭೀಮಾ ನದಿ ಪಾತ್ರದಲ್ಲಿ ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳಲು ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ನಿಮಗೆ ವಹಿಸಲಾದ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಸೂಚಿಸಿದರು.

ಭಾರಿ ಮಳೆಯಿಂದ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ವರದಿಯನ್ನು ಸಲ್ಲಿಸಲು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಹಾನಿಯಾಗಿರುವ ಮನೆಗಳ ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರವಾಹ ಪರಿಸ್ಥಿತಿಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಲು ಅಗ್ನಿಶಾಮಕ ಇಲಾಖೆ ಅಧಿಕಾರಿ/ಸಿಬ್ಬಂದಿಗಳು ಸನ್ನದ್ದರಿದ್ದು, ಅವಶ್ಯವಿದ್ದಲ್ಲಿ ಅವರ ಸಹಾಯ ಪಡೆಯಲು ಸೂಚಿಸಿದರು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ದವಾಗಿದ್ದು, ಜನ ಜಾನುವಾರುಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.

ಎಲ್ಲಾ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಕೇಂದ್ರಸ್ಥಾನ ಬಿಟ್ಟು ಹೋಗದಂತೆ ಸೂಚಿಸಿದರು.

ಮಳೆಯಿಂದ ಶಾಲಾ, ಕಾಲೇಜು, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯುತ್ ಸರಬರಾಜು ಕಡಿತ ಈ ಎಲ್ಲಾ ಅಂಶಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X