ಯಾದಗಿರಿ | ಅ.26ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಯಾದಗಿರಿ: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಅ.26ರಂದು 2024–25ನೇ ಶೈಕ್ಷಣಿಕ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮಹಾಸಭಾದ ಯಾದಗಿರಿ ಜಿಲ್ಲಾ ಅಧ್ಯಕ್ಷ ನರಸಪ್ಪ ನಾಯಕ ತಿಳಿಸಿದ್ದಾರೆ.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಎಸೆಸೆಲ್ಸಿಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.86 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಾಲ್ಮೀಕಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪುರಸ್ಕಾರ ನೀಡಲಾಗುವುದು. ಜೊತೆಗೆ ಗಿರಿನಾಡು ಪ್ರದೇಶದ ಸಮಾಜದ ಉತ್ತಮ ಶಿಕ್ಷಕರಿಗೂ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠ ರಾಚನಹಳ್ಳಿಯ ಪ್ರಸನಾಂದಪುರಿ ಮಹಾಸ್ವಾಮಿಗಳು, ಗೋಲಪಳ್ಳಿ ಮಠದ ವರದಾನಂದೇಶ್ವರ ಮಹಾಸ್ವಾಮಿಗಳು, ಸುಕ್ಷೇತ್ರ ಅಬ್ಬೆತುಕೂರದ ಡಾ. ಗಂಗಾಧರ ಶಿವಾಚಾರ್ಯ ಮಹಾಸ್ವಾಮಿಗಳು, ಸುಕ್ಷೇತ್ರ ಹೆಡಗಿಮದ್ರಾದ ಶಾಂತಶಿವಯೋಗಿ ಮಲ್ಲಿಕಾರ್ಜುನ ಪಂಡಿತರಾಧ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ರಾಯಚೂರು ಲೋಕಸಭಾ ಸದಸ್ಯ ಜಿ. ಕುಮಾರ ನಾಯಕ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ್ ತುನ್ನೂರು ಹಾಗೂ ಸುರಪುರ ಶಾಸಕ ವೇಣುಗೋಪಾಲ ನಾಯಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.







