ಯಾದಗಿರಿ | ಮಕ್ಕಳಿಗೆ ಶಿಕ್ಷಣದ ಜೊತೆ ಶಿಸ್ತು ಕಲಿಸಿ : ರಾಮಚಂದ್ರ ಬಸೂದೆ

ಯಾದಗಿರಿ: ಗ್ರಾಮೀಣ ಮಕ್ಕಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣದ ಜೊತೆಗೆ ಶಿಸ್ತು ಕಲಿಸಬೇಕು ಎಂದು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನೋಡಲ್ ಅಧಿಕಾರಿ ರಾಮಚಂದ್ರ ಬಸೂದೆ ಸಲಹೆ ನೀಡಿದರು.
ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿಯಿಂದ 2024 -25ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ( ಮಧ್ಯಾಹ್ನ ಬಿಸಿಯೂಟ) ಸಾಮಾಜಿಕ ಪರಿಶೋಧನಾ ಹಾಗೂ ಪಾಲಕರ ಸಭೆ ಉದ್ಘಾಟಿಸಿ ಮಾತನಾಡಿದರು.
ಈ ದೇಶ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಮುಖ್ಯವಾಗಿದ್ದು, ಪಾಲಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಿ ಮನೆಯಲ್ಲಿ ಮಕ್ಕಳೊಂದಿಗೆ ಚರ್ಚಿಸಿ ಶಿಕ್ಷಣದ ಗುಣಮಟ್ಟ ಹಾಗೂ ಅವರ ಕುಂದು ಕೊರತೆಗಳು ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಸರಕಾರದ ಯೋಜನೆಯಾದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನವಾಗಿದ್ದು ಎಂದು ಹೇಳಿದರು.
ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಪಾಲಕರ ಸಭೆ ಜರಗಿತು.
ಏನಾದರೂ ನ್ಯೂನ್ಯತೆಗಳು ಕಂಡು ಬಂದಲ್ಲಿ ತಕ್ಷಣವೇ ಪಾಲಕರು ಶಾಲಾ ಆಡಳಿತದೊಂದಿಗೆ ಚರ್ಚಿಸಬೇಕು. ಇದು ಪಾಲಕರ ಮುಖ್ಯ ಕರ್ತವ್ಯವಾಗಿದೆ. ಅದೇ ರೀತಿ ವಿದ್ಯಾರ್ಥಿಗಳು ಸಹ ಶಿಕ್ಷಕರೊಂದಿಗೆ ನಯ-ವಿನಯದಿಂದ ನಡೆದುಕೊಂಡು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ನರೇಶ ಕುಮಾರ ಮೋಟಕರ್ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಯಾದ ಲಕ್ಷ್ಮಣ ನಾಯಕ, ಲಕ್ಷ್ಮಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಗುರುಗಳು ಅಂಜನಾ ಬಿರಾದರ್, ಎಸ್‌ಡಿಎಂಸಿ ಅಧ್ಯಕ್ಷ ಸಪ್ನ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲರೆಡ್ಡಿ, ಎಸ್‌ಡಿಎಂಸಿ ಸದಸ್ಯರು, ಮುಖಂಡರಾದ ರಂಗಸ್ವಾಮಿ, ಶಾಲೆಯ ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.







