ಯಾದಗಿರಿ | ಪಂಚಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ದೊರೆಯುವಂತೆ ನೋಡಿಕೊಳ್ಳಿ : ಶ್ರೇಣಿಕ್ ಕುಮಾರ್ ದೋಖಾ

ಯಾದಗಿರಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಲು ಪಂಚಗ್ಯಾರಂಟಿ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೇಣಿಕ್ ಕುಮಾರ್ ದೋಖಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನ್ನ ಭಾಗ್ಯ ಯೋಜನೆಯಡಿ ಅರ್ಹರಿಗೆ ಲಾಭ ದೊರೆಯುತ್ತಿರುವ ಬಗ್ಗೆ ಅಧಿಕಾರಿಗಳು ನಿಗಾ ಇಡಬೇಕು. ನ್ಯಾಯ ಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿಯೂ ನಿಗಾ ಇಡಬೇಕು. ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಅರ್ಹರು ವಂಚಿತರಾಗದಂತೆ ನಿಗಾವಹಿಸಿ, ಸಕಾಲಕ್ಕೆ ಹಣ ಪಾವತಿಯಾಗುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಮಾತನಾಡಿ, ಯುವನಿಧಿ, ಗೃಹ ಜ್ಯೋತಿ, ಶಕ್ತಿ ಯೋಜನೆಗಳ ಲಾಭವನ್ನು ಅರ್ಹರಿಗೆ ದೊರಕಿಸಬೇಕು. ಪಂಚಗ್ಯಾರಂಟಿ ಯೋಜನೆಗಳ ಲಾಭ ಪ್ರತಿ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಉಪಾಧ್ಯಕ್ಷರಾದ ಸ್ಯಾಮ್ಸನ್ ಮಾಳಿಕೇರಿ, ಬಸವರಾಜ ಬಿಳಾರ್, ಸದಸ್ಯರಾದ ದಾವೂದ್ ಪಠಾಣ್,ಸಿದ್ದನಗೌಡ ಹಂದ್ರಾಳ,ಶಿವಕುಮಾರ್, ಸಂಜೀವಕುಮಾರ ಮುಂಡರಗಿ, ಮಾನಪ್ಪ ವಠಾರ್ ಸಗರ,ಧರ್ಮ ಬಾಯಿ ತುಳಜಾ, ಮಾರಯ್ಯ ರಾಯಪ್ಪ, ತಾಲೂಕ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







