ಯಾದಗಿರಿ | ದೇವಿಕೇರಾ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಸ್ಥಳಾಂತರಕ್ಕೆ ಗ್ರಾಮಸ್ಥರ ಒತ್ತಾಯ

ಯಾದಗಿರಿ : ಸುರಪುರ ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಮಂಜೂರಾದ ಸರಕಾರಿ ಭೂಮಿಯನ್ನು ತಕ್ಷಣವೇ ರದ್ದುಪಡಿಸಿ, ಬೇರೆ ಯೋಗ್ಯ ಸ್ಥಳದಲ್ಲಿ ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.
ದೇವಿಕೇರಾ ಗ್ರಾಮದ ಸರಕಾರಿ ಜಮೀನನ್ನು ಸಾರ್ವಜನಿಕ ಸ್ಮಶಾನಕ್ಕಾಗಿ ಮಂಜೂರು ಮಾಡಲಾಗಿದೆ. ಈ ಭೂಮಿ ಊರಿಗೆ ಅತೀ ಸಮೀಪದಲ್ಲಿದ್ದು, ಅಕ್ಕಪಕ್ಕದಲ್ಲಿ ವಸತಿ ಮನೆಗಳಿರುವುದರಿಂದ ಇಲ್ಲಿ ಶವ ಸಂಸ್ಕಾರ ನಡೆಸುವುದು ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸ್ಥಳ ಸ್ಮಶಾನಕ್ಕೆ ಸೂಕ್ತವಲ್ಲದೆ, ಸರ್ವ ಜನಾಂಗದವರಿಂದಲೂ ವಿರೋಧ ವ್ಯಕ್ತವಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್, ಗೋಪಾಲ ತೆಳಗೇರಿ, ಭೀಮಣ್ಣ ಕಮತಗಿ, ಸೈದಪ್ಪ ಕೂಯಿಲೂರ್, ಮಲ್ಲಪ್ಪ ಬೆವಿನಗಿಡಿ, ಯಕಂಪ್ಪ ಹೊಸಮನಿ, ಶರಣಪ್ಪ ಪೂಜಾರಿ, ಮಲ್ಲಪ ಯಮನೂರ, ವೆಂಕಟೇಶ ಹೊಸಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





