Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಿಭಿನ್ನತೆ ಹೊಂದಿದ ಭಾರತಕ್ಕೆ...

ವಿಭಿನ್ನತೆ ಹೊಂದಿದ ಭಾರತಕ್ಕೆ ಅಪಸ್ವರವಿಲ್ಲದ ಶ್ರೇಷ್ಠ ಸಂವಿಧಾನ ರಚಿಸಿದವರು ಡಾ.ಅಂಬೇಡ್ಕರ್ : ಸಚಿವ ಶರಣಬಸಪ್ಪ ದರ್ಶನಾಪುರ

ವಾರ್ತಾಭಾರತಿವಾರ್ತಾಭಾರತಿ14 April 2025 4:53 PM IST
share
Photo of Program

ಯಾದಗಿರಿ : ವಿವಿಧ ಭಾಷೆ, ಧರ್ಮ, ಸಮಾಜ, ಆಚಾರ, ವಿಚಾರ ಭೌಗೋಳಿಕ ವಿಭಿನ್ನತೆ ಹೊಂದಿರುವ ಭಾರತಕ್ಕೆ ಯಾರೊಬ್ಬರೂ ಅಪಸ್ವರ ಎತ್ತದಂತಹ ಶ್ರೇಷ್ಠ ಸಂವಿಧಾನವನ್ನು, ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ್ದಾರೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವಾರ್ಪನೆ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ವೈವಿಧ್ಯಮಯ ದೇಶವಾಗಿದೆ. ವಿವಿಧ ಧರ್ಮ, ಭಾಷೆ, ಆಚಾರ, ವಿಚಾರಗಳನ್ನು ಹೊಂದಿರುವಂತಹ ಹಲವು ಸಮಾಜ, ಜನಾಂಗಗಳ ದೇಶವಾಗಿದೆ. ವಿವಿಧ ರೀತಿಯ ಭೌಗೋಳಿಕತೆಯನ್ನು ಸಹ ಹೊಂದಿರುವಂತಹ ಇಂತಹ ರಾಷ್ಟ್ರಕ್ಕೆ ಉತ್ಕೃಷ್ಟವಾದ ಶ್ರೇಷ್ಠ ಸಂವಿಧಾನವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ್ದಾರೆ. ಅದರಲ್ಲಿಯೂ ಯಾರೊಬ್ಬರ ಅಪಸ್ವರ ವಿಲ್ಲದಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿರುವುದು ನಮ್ಮ ದೇಶದ ಅಖಂಡತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕಲಬುರಗಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡ ಸಹಪ್ರಾಧ್ಯಾಪಕರಾದ ಡಾ.ಜಯದೇವಿ ಗಾಯಕವಾಡ ಅವರು ಮಾತನಾಡಿ, ಶತ-ಶತಮಾನಗಳ ನೋವು ಅನುಭವಿಸಿ ಶೋಷಿತ ವರ್ಗಗಳಿಗೆ ಸಂವಿಧಾನದ ಮೂಲಕ ನ್ಯಾಯ ಒದಗಿಸುವ ಕಾರ್ಯವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ಮಾಡಿದ್ದಾರೆ. ಶ್ರಮಿಕರು, ಕಾರ್ಮಿಕರು ,ಮಹಿಳೆಯರು, ರೈತರು ಹಾಗೂ ಬಡ ಜನರಿಗೆ ನ್ಯಾಯ ಒದಗಿಸಿದ್ದಾರೆ. ಶೋಷಿತರ ಹಕ್ಕುಗಳಿಗಾಗಿ, ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದ ಅವರು ಸಮಾನತೆ ಮತ್ತು ಸ್ವಾತಂತ್ರ್ಯವನ್ನು ದೇಶಕ್ಕೆ ತಿಳಿ ಹೇಳಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಸ್ತಾವನೆಯಲ್ಲಿಯೇ ವಿಶ್ವದ ಇತರೆ ರಾಷ್ಟ್ರಗಳಿಗಿಂತಲೂ ಮೀಗಿಲಾದ ಧ್ಯೇಯವನ್ನು ವಿವರಿಸಿದ್ದಾರೆ. ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆ ಓದಲಾಯಿತು. ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ, ಸಮಾಜದ ವಿವಿಧ ಕ್ಷೇತ್ರದಲ್ಲಿ ಶ್ರಮಿಸಿದ ಗಣ್ಯರಿಗೆ ಸನ್ಮಾನಿಸಲಾಯಿತು. ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಲಲಿತಾ ಅನಪೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿನಾಯಕ್ ಮಾಲಿ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಕ್ ಶಂಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಯಂತೋತ್ಸವ ಸಮಿತಿ ಅಧ್ಯಕ್ಷ ನರೇಂದ್ರ ಅನ್ವರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ಮುಧೋಳ, ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಮರೆಯಪ್ಪ ಚಟ್ಟೇರಕರ್, ಮಲ್ಲಪ್ಪ ಗೋಗಿ, ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಎಸ್. ಎಸ್. ಅವರು ಸ್ವಾಗತಿಸಿದರು. ಜ್ಯೋತಿಲತಾ ತಡಬೀಡಿ ಕಾರ್ಯಕ್ರಮ ನಿರ್ವಹಿಸಿದರು. ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ವಂದಿಸಿದರು. ಶರಣಬಸಪ್ಪ ವಟಾರ್ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X