Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಪರಿಶಿಷ್ಟ ಸಮುದಾಯದವರಿಗೆ...

ಯಾದಗಿರಿ | ಪರಿಶಿಷ್ಟ ಸಮುದಾಯದವರಿಗೆ ಸಾಮಾಜಿಕ ಬಹಿಷ್ಕಾರ ಆರೋಪ: ಚಿನ್ನಾಕಾರ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 Jun 2025 2:59 PM IST
share
ಯಾದಗಿರಿ | ಪರಿಶಿಷ್ಟ ಸಮುದಾಯದವರಿಗೆ ಸಾಮಾಜಿಕ ಬಹಿಷ್ಕಾರ ಆರೋಪ: ಚಿನ್ನಾಕಾರ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ

ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿನ್ನಾಕಾರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ತಂಡ ನಿನ್ನೆ(ಮಂಗಳವಾರ) ಚಿನ್ನಾಕಾರ ಗ್ರಾಮಕ್ಕೆ ಭೇಟಿ ನೀಡಿ, ಸಭೆ ನಡೆಸಿದರು.

ಗ್ರಾಮದಲ್ಲಿನ 9 ಗುಂಟೆ ಸರಕಾರಿ ಜಮೀನಿನಲ್ಲಿ 6 ಗುಂಟೆ ಸಮಾಜ ಕಲ್ಯಾಣ ಇಲಾಖೆಗೆ ಈ ಹಿಂದೆಯೇ ನೀಡಲಾಗಿತ್ತು. ಉಳಿದ 3 ಗುಂಟೆ ಜಮೀನಿನಲ್ಲಿ ಈಚೆಗೆ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಂದ ಹಿನ್ನೆಲೆ 3 ಗುಂಟೆ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ನಿರ್ಧರಿಸಿದ ನಂತರ ಸಮಸ್ಯೆ ಕಾಣಿಸಿಕೊಂಡಿದೆ.

ವರದಿ ಸಲ್ಲಿಸಲು ಸೂಚನೆ: 3 ಗುಂಟೆ ಸರಕಾರಿ ಜಮೀನಿಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿ ಸುಶೀಲಾ ಜಿ.ಅವರು ತಹಶೀಲ್ದಾರ್ ಶಾಂತಗೌಡ ಬಿರಾದರ ಅವರಿಗೆ ಸೂಚಿಸಿದರು.

ಅಲ್ಲದೆ, ಕೂಡಲೇ ವರದಿ ನೀಡಿದರೆ, ಸ್ಥಳದ ಕುರಿತಾಗಿ ಮುಂದಿನ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಸಾಮರಸ್ಯಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಂತಿ ಸಭೆ: ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳವಾರ‍ ತಹಶೀಲ್ದಾರ್, ಡಿವೈಎಸ್‌ಪಿ, ತಾಪಂ ಇಒ, ಸಮಾಜ ಕಲ್ಯಾಣ ಇಲಾಖೆಯ ಎಡಿ, ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧಿಕಾರಿಗಳು ಗ್ರಾಮದಲ್ಲಿ ಸಭೆ ನಡೆಸಿದರು.

ತಾರತಮ್ಯ ಮಾಡದಂತೆ ತಾಕೀತು: ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಆರೋಪ ಸಂಬಂಧ ಗ್ರಾಮದಲ್ಲಿನ ಕ್ಷೌರದಂಗಡಿ, ಹೋಟೆಲ್‌ ಸೇರಿದಂತೆ ಎಲ್ಲಾ ರೀತಿಯ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ತಾರತಮ್ಯ ಮಾಡದಂತೆ, ನಿಗದಿತ ದರದಂತೆ ಹಣ ನೀಡಿದರೆ ಅವರಿಗೆ ವಸ್ತುಗಳನ್ನು ಮಾರಾಟ ಮಾಡುವಂತೆ, ಸೇವೆ ನೀಡುವಂತೆ ಅಧಿಕಾರಿಗಳ ತಂಡ ತಿಳಿವಳಿಕೆ ಪತ್ರಗಳನ್ನು ನೀಡಿ, ತಾಕೀತು ಮಾಡಿತು.

ಘಟನೆ ಹಿನ್ನೆಲೆ:

2017ರಲ್ಲಿ ಗ್ರಾಮದಲ್ಲಿ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಭವನ ನಿರ್ಮಾಣಕ್ಕೆ 6 ಗುಂಟೆ ಜಾಗವನ್ನು ಸರಕಾರ ಮಂಜೂರು ಮಾಡಿತ್ತು. ಆದರೆ ಕಾರಣಾಂತರಗಳಿಂದ ಭವನ ಇದುವರೆಗೆ ನಿರ್ಮಾಣ ಮಾಡಿರುವುದಿಲ್ಲ. ಆದರೆ ಕಳೆದ ಒಂದು ವರ್ಷದಿಂದ ಸವರ್ಣೀಯರು, ಭವನಕ್ಕೆ ಮಂಜೂರದ ಜಾಗದಲ್ಲಿ ಗ್ರಾಮ ಪಂಚಾಯತಿ ಕಟ್ಟಡ ನಿರ್ಮಾಣಕ್ಕೆ ಮುಂದಾದ್ದರು. ಇದೇ ಕಾರಣಕ್ಕೆ ಕಳೆದ ನಾಲ್ಕು ದಿನಗಳ ಹಿಂದೆ ಅಂದರೆ ಜೂನ್ 20 ರಂದು ಜೆಸಿಬಿ ಮೂಲಕ ಜಾಗವನ್ನು ಸ್ವಚ್ಚ ಮಾಡಿ ಪಂಚಾಯತ್‌ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಸಿದ್ದರಾಗಿದ್ದರು. ಖುದ್ದು ಪಂಚಾಯತಿ ಅಧ್ಯಕ್ಷರಿಂದ ಹಿಡಿದು ಪಂಚಾಯತಿ ಸದಸ್ಯರು ಮುಂದೆ ನಿಂತು ಜಾಗ ಸ್ವಚ್ಚತೆ ಮಾಡುವುದಕ್ಕೆ ಮುಂದಾಗಿದ್ದರು. ಇದಕ್ಕೆ ದಲಿತರ ಸಮುದಾಯದ ಜನ ಅಡ್ಡಪಡಿಸಿದ್ದಾರೆ. ಇದು ಅಂಬೇಡ್ಕ‌ರ್ ಭವನಕ್ಕೆ ಮಂಜೂರಾದ ಜಾಗ ಹೀಗಾಗಿ ಇಲ್ಲಿ ಪಂಚಾಯತಿ ಕಟ್ಟಡ ಬೇಡ ಎಂದು ವಿರೋಧ ಮಾಡಿದ್ದಾರೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸವರ್ಣೀಯರು ದಲಿತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ದಲಿತ ಮುಖಂಡ ಹುಸೇನಪ್ಪ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X