ಯಾದಗಿರಿ | ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಮೇಲ್ವಿಚಾರಕ ಮಲ್ಲಿಕಾರ್ಜುನ

ಮಲ್ಲಿಕಾರ್ಜುನ
ಯಾದಗಿರಿ : ಫೋನ್ ಪೇ ಮೂಲಕ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಕಚೇರಿಯ ಸರ್ವೇ ಮೇಲ್ವಿಚಾರಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಜಿಲ್ಲೆಯ ಸುರಪುರ ತಹಶೀಲ್ದಾರ್ ಕಚೇರಿಯ ಸರ್ವೇ ಮೇಲ್ವಿಚಾರಕ ಮಲ್ಲಿಕಾರ್ಜುನ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ದೂರುದಾರ ಸೋಮನಾಥ ಅವರ ಬಳಿ ಜಮೀನು (ಫಾರ್ಮ್ 10) ತತ್ಕಾಲ್ ಪೋಡಿ ನೀಡಲು 20 ಸಾವಿರ ರೂ. ಬೇಡಿಕೆ ಇಟ್ಟಿದ್ದು, ಫೋನ್ ಪೇ ಮೂಲಕ 19 ಸಾವಿರ ರೂ. ಸ್ವೀಕರಿಸಿದ್ದ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಯಾದಗಿರಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ಪಿ ಜೆ.ಹೆಚ್.ಇನಾಮದಾರ್ ಅವರ ಮಾರ್ಗದರ್ಶನದಲ್ಲಿ ಪಿಐಗಳಾದ ಸಂಗಮೇಶ, ಸಿದ್ದರಾಯ ಬಳೂರ್ಗಿ ಹಾಗೂ ಸಿಬ್ಬಂದಿ ದಾಳಿ ಮಾಡಿ (ಎಡಿಎಲ್ ಆರ್) ಕಚೇರಿಯ ಸರ್ವೇ ಮೇಲ್ವಿಚಾರಕ ಮಲ್ಲಿಕಾರ್ಜುನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Next Story





