Yadagiri | ಬಾಚವಾರ ಅರಣ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ : ಕೊಲೆ ಶಂಕೆ

ಸಾಂದರ್ಭಿಕ ಚಿತ್ರ
ಯಾದಗಿರಿ: ತಾಲ್ಲೂಕಿನ ಬಾಚವಾರ ಸಮೀಪದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಗುರುವಾರ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಅರಣ್ಯದ ನಿರ್ಜನ ಪ್ರದೇಶದಲ್ಲಿ ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿ, ಬಳಿಕ ರಾಸಾಯನಿಕ ಬಳಸಿ ಮೃತದೇಹವನ್ನು ಸುಟ್ಟು ಸಾಕ್ಷ್ಯನಾಶಕ್ಕೆ ಯತ್ನಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತದೇಹ ಕೊಳೆತು ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಯಾದಗಿರಿ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ಮೃತ ಮಹಿಳೆ ಸುಮಾರು 30ರಿಂದ 35 ವರ್ಷದೊಳಗಿನವರಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಅವರ ಗುರುತು ಹಾಗೂ ಯಾವ ಊರಿಗೆ ಸೇರಿದವರು ಎಂಬುದು ಇನ್ನೂ ಪತ್ತೆಯಾಗಿಲ್ಲ.
ಮಾಹಿತಿ ತಿಳಿದು ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




