ಯಾದಗಿರಿ | ಬಸವೇಶ್ವರ ಜಯಂತಿ ಆಚರಣೆ ಮಾಡೋದು ಪುಣ್ಯದ ಕೆಲಸ : ಬಸವರಾಜ ವಿಭೂತಿಹಳ್ಳಿ

ಯಾದಗಿರಿ : ಶತಮಾನಗಳ ಹಿಂದೆಯೇ ನಾಡಿಗೆ ಸಮಾನತೆಯ ಸಂದೇಶ ಸಾರುವ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದ ವಚನಕಾರ ಬಸವಣ್ಣನವರ ಜಯಂತಿ ಅಂಗವಾಗಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ನಡೆಯಿತು.
ನಗರದ ಗ್ರೀನ್ ಸಿಟಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕಾರ್ಯಕ್ರಮ ಉದ್ಭಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಿಸುವುದು ಪುಣ್ಯದ ಕೆಲಸವಾಗಿದ್ದು, ರಾಜ್ಯದ ಮಕ್ಕಳು ಸೇರಿದಂತೆ ಎಲ್ಲರಿಗೂ ಬಸವಣ್ಣನವರ ಬಗ್ಗೆ ತಿಳಿದಿದೆ. ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿರುವ ಮಹಿಳಾ ಸಮಾನತೆ ಬಸವಣ್ಣನವರು ಅನುಭವ ಮಂಟಪದಲ್ಲಿ ಜಾರಿಗೆ ತಂದಿದ್ದರು. ಬಿಜೆಪಿ ಬಸವಣ್ಣನವರ ತತ್ವಗಳನ್ನು ಪಾಲಿಸುತ್ತಾ ಬಂದಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡೆ ನಾಗರತ್ನ ಕುಪ್ಪಿ,ಯುಡ ಮಾಜಿ ಅಧ್ಯಕ್ಷ ಬಸವರಾಜ ಚಂಡ್ರಕಿ ಮತ್ತು ರುದ್ರುಗೌಡ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ,ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ ಮತ್ತು ವಿಜಯಲಕ್ಷ್ಮಿ ನಾಯಕ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಶಕುಂತಲಾ ಜಿ., ಭೀಮಬಾಯಿ ಶೆಂಡಿಗಿ, ರಮೇಶ್ ದೊಡಮನಿ, ಶರಣಗೌಡ ಅಲಿಪುರ, ಲಕ್ಷ್ಮಿ ಪುತ್ರ ಪಾಟೀಲ್, ಸೋಮು ಗೌಡ ಮುದ್ನಾಳ, ಶ್ರೀಕಾಂತ್ ಸುಂಗಲ್ಕರ್,ಶಿವು ಕೋಂಕಲ್, ದಾರು ಪವಾರ್ ಇಮಾನ್ ವೆಲ್ ಜಿಮ್ಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.







