Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮಕ್ಕಳು ಚನ್ನಾಗಿ ಓದಿ ಉತ್ತಮ...

ಯಾದಗಿರಿ | ಮಕ್ಕಳು ಚನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆಯಬೇಕು : ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ11 Feb 2025 5:40 PM IST
share
ಯಾದಗಿರಿ | ಮಕ್ಕಳು ಚನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆಯಬೇಕು : ಶಾಸಕ ಶರಣಗೌಡ ಕಂದಕೂರ

ಯಾದಗಿರಿ : ಕಳೆದ ವರ್ಷದ ಎಸೆಸೆಲ್ಸಿಯಲ್ಲಿ ಶೇ.91ರಷ್ಟು ಫಲಿತಾಂಶ ಪಡೆದ ಸುದ್ದಿ ತಿಳಿದು ತುಂಬಾ ಖುಷಿ ಆಯಿತು. ಈ ವರ್ಷದಲ್ಲಿ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅವರು ವಸತಿ ಶಾಲಾ ಮಕ್ಕಳಿಗೆ ಪ್ರೋತ್ಸಾಹಿಸಿದರು.

ಯಾದಗಿರಿ ತಾಲೂಕಿನ ಸೈದಾಪುರದ ಸಮೀಪ ಇರುವ ರಾಚನಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆಯಬೇಕು ನಿಮಗೆ ಬೇಕಾದ ಅವಶ್ಯ ಸೌಲಭ್ಯಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ. ಇದು ವಸತಿ ಶಾಲಾ ಆಗಿರುವ ಹಿನ್ನಲೆಯಲ್ಲಿ ಶಿಕ್ಷಕರು ಬೋಧನೆಯ ಜತೆಗೆ ಮಕ್ಕಳ ಯೋಗಕ್ಷೇಮವನ್ನು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದಣ್ಣ ಅಣಬಿ, ನಿರ್ಮಿತಿ ಕೇಂದ್ರದ ಇಂಜಿನಿಯರ್ ಶಿವರಾಜ, ಪ್ರಾಂಶುಪಾಲರಾದ ಶ್ರೀಶೈಲ ಕೊರಳ್ಳಿ, ಜೆಡಿಎಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಮುಖಂಡರಾದ ಬಸರಾಜಪ್ಪಗೌಡ ಗೊಂದಡಗಿ, ಚಂದ್ರುಗೌಡ ಸೈದಾಪುರ, ನರಸಪ್ಪ ಕವಡೆ ಬದ್ದೇಪಲ್ಲಿ, ಚನ್ನರೆಡ್ಡಿಗೌಡ ಸೈದಾಪುರ, ರಾಜು ಉಡುಪಿ, ಡಿ.ತಾಯಪ್ಪ, ಜಗದೀಶ ಕಲಾಲ, ಯಂಕೋಬ್ ತುರುಕಾನದೊಡ್ಡಿ, ವಿಶ್ವನಾಥ ಘಂಟಿ, ಲಕ್ಷ್ಮಣರೆಡ್ಡಿಗೌಡ, ಆನಂದ ವಾರದ, ಮಲ್ಲೇಶ ನಾಯಕ, ಲಕ್ಷ್ಮಣ ನಾಯಕ ಕೂಡ್ಲೂರ, ವಾರ್ಡನ್ ನಾಗಮ್ಮ ಅವಟೆ, ಶಿಕ್ಷಕರಾದ ಲಕ್ಷ್ಮಣ, ಮಹಿಬೂಬ ಪಟೇಲ್ ಜಿನಕೇರಾ, ವೀರೇಶ ಸೇಡಂ, ತಿಪ್ಪಣ್ಣ, ಮಲ್ಲಿಕಾರ್ಜುನ, ಸಿದ್ದಣ್ಣ, ಜಯಶ್ರೀ, ಸುಮಂಗಲ, ಭಾರತಿ, ಮರೆಮ್ಮ ಸೇರಿದಂತೆ ಮುಂತಾದವರಿದ್ದರು.

ವಿವಿಧ ಕಾಮಗಾರಿಗಳಿಗೆ ಶಾಸಕ ಕಂದಕೂರ ಅಡಿಗಲ್ಲು :

ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಒಳಗಡೆ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ, 60 ಲಕ್ಷ ರೂ. ಮೊತ್ತದಲ್ಲಿ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ 4 ಕೋಣೆಗಳ ನಿರ್ಮಾಣ, ಕ್ಯಾತನಾಳ ಇಂದಿರಾನಗರದಲ್ಲಿ 10 ಲಕ್ಷ ರೂ. ಮೊತ್ತದ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ, ಎಸ್ಟಿ ವಾರ್ಡನಲ್ಲಿ 10 ಲಕ್ಷ ರೂ. ಮೊತ್ತದ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ, ಶೆಟ್ಟಹಳ್ಳಿ ಗ್ರಾಮದಲ್ಲಿ 10 ಲಕ್ಷ ರೂ. ಮೊತ್ತದ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ, ಸೈದಾಪುರ ಸ್ಟೇಷನ್ ನ ಸೇವಾಲಾಲ್ ನಗರದಲ್ಲಿ 10 ಲಕ್ಷ ರೂ. ಮೊತ್ತದ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ, ಸೈದಾಪುರ ಸಮೀಪದ ರಾಚನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 15 ಲಕ್ಷ ರೂ. ಮೊತ್ತದ ಶುದ್ಧ ನೀರಿನ ಕುಡಿಯುವ ಘಟಕ ನಿರ್ಮಾಣ, ಮುಖ್ಯರಸ್ತೆ ಯಿಂದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ 20 ಲಕ್ಷ ರೂ. ಮೊತ್ತದ ಅಡಿಗಲ್ಲು ಸಮಾರಂಭವನ್ನು ಮಂಗಳವಾರ ಶಾಸಕ ಶರಣಗೌಡ ಕಂದಕೂರ ಅವರು ನೆರವೇರಿಸಿದರು.

ಬಾಲ್ಯ ವಿವಾಹಕ್ಕೆ ಅವಕಾಶ ಕೊಡಬೇಡಿ :

ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗು ಆಗಿದ್ದು, ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪಾಧವಾಗಿದೆ. ಆದಾಗ್ಯೂ ಗ್ರಾಮೀಣ ಭಾಗದಲ್ಲಿ ವಯಸ್ಸಿಗೆ ಮುನ್ನ ಮದುವೆ ಪ್ರಕರಣಗಳು ಕಂಡುಬರುತ್ತಿರುವುದು ಅತ್ಯಂತ ನೋವಿನ ಸಂಗತಿ. ವಿದ್ಯಾವಂತ ಮಕ್ಕಳಾದ ನೀವು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿ, ಸಮಾಜದಲ್ಲಿ ಹೆಸರು ಪಡೆಯಬೇಕು. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ಕೊಡಬೇಡಿ. ಚಿಕ್ಕ ವಯಸ್ಸಿನಲ್ಲಿ ವಿವಾಹ ಆಗುವುದರಿಂದ ಭವಿಷ್ಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತವೆ ಇದರ ಬಗ್ಗೆ ಜಾಗೃತಿ ವಹಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಸೈದಾಪುರ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲಾ ಮಕ್ಕಳಿಗೆ ಕಿವಿ ಮಾತು ಹೇಳಿದರು.

ವಿದ್ಯಾರ್ಥಿಳೊಂದಿಗೆ ಶಾಸಕ ಕಂದಕೂರ ಭೋಜನ :

ಸೈದಾಪುರ ಸಮೀಪದ ರಾಚನಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಮಂಗಳವಾರ ಆಗಮಿಸಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು, ಮಕ್ಕಳೊಂದಿಗೆ ಪ್ರಾರ್ಥನೆ ಸಲ್ಲಿಸಿ. ಅವರ ಜೊತೆ ಕುಳಿತು ಮಧ್ಯಾಹ್ನದ ಊಟ ಸವಿದರು. ಇದೇ ವೇಳೆ ಪ್ರತಿನಿತ್ಯ ಮೆನು ಚಾರ್ಟ್ ಪ್ರಕಾರ ಊಟ, ತರಗತಿಗಳಲ್ಲಿ ಬೋಧನೆ ಒಳಗೊಂಡಂತೆ ಮೂಲ ಸೌಲಭ್ಯಗಳ ಪೂರೈಕೆ ಸಮರ್ಪಕವಾಗಿ ಮಾಡಲಾಗುತ್ತಿರುವ ಕುರಿತು ವಿದ್ಯಾರ್ಥಿಗಳ ಜತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X