ಯಾದಗಿರಿ | ಸಂಪೂರ್ಣ ಭ್ರಷ್ಟಾಚಾರವೇ ಕಾಂಗ್ರೆಸ್ ಸರಕಾರದ ಸಾಧನೆ : ವಿಭೂತಿಹಳ್ಳಿ ಆರೋಪ

ಯಾದಗಿರಿ : ರಾಜ್ಯದ ಜನರಿಗೆ ಅವೈಜ್ಞಾನಿಕ ಗ್ಯಾರಂಟಿ ಯಿಂದಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಸುಳ್ಳು ಭರವಸೆಯೇ ಮೂಲ ಮಂತ್ರವಾಗಿರಿಸಿ ಕೊಂಡ ಏಕೈಕ ಸರಕಾರ ಅದು ಕಾಂಗ್ರೆಸ್ ಸರಕಾರವಾಗಿದೆ ಎಂದು ಯಾದಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಬೆಲೆ ಏರಿಕೆಯೇ ತಮ್ಮ ಅಜೆಂಡಾವಾಗಿ ಇಟ್ಟುಕೊಂಡಿದೆ. ಸಂಪೂರ್ಣ ಭ್ರಷ್ಟಾಚಾರವೇ ಕಾಂಗ್ರೆಸ್ ಸರಕಾರದ ಸಾಧನೆಯಾಗಿದೆ. ಯಾವುದೇ ಅಭಿವೃದ್ಧಿ ವಿಷಯ ಇಲ್ಲದೇ ಅಧಿಕಾರ ನಡೆಸಿ, ಪ್ರತಿಯೊಂದು ವಸ್ತುವಿನ ಬೆಲೆ ಏರಿಸಿ ತಮಾಷೆ ನೋಡುತ್ತಿದೆ ಎಂದು ಆರೋಪಿಸಿದರು.
ಹಿರಿಯ ಮುಖಂಡ ರಾಚಣ್ಣ ಗೌಡ ಮುದ್ನಾಳ್, ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ್, ಬಿಜೆಪಿ ಯುವ ಮುಖಂಡ ಮಹೇಶ್ ರೆಡ್ಡಿಗೌಡ ಮುದ್ನಾಳ್,ಹಿರಿಯ ಮುಖಂಡ ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ್ ನಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಕಾಮ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಜಿಲ್ಲಾ ಬಿಜೆಪಿ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ್ ಭಾಗವಹಿಸಿದ್ದರು.





