Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕಾಂಗ್ರೆಸ್ ರಾಜ್ಯದ ಜನತೆಗೆ...

ಯಾದಗಿರಿ | ಕಾಂಗ್ರೆಸ್ ರಾಜ್ಯದ ಜನತೆಗೆ ಆತ್ಮಹತ್ಯೆಗಳ ಭಾಗ್ಯ ನೀಡಿದೆ : ಹಣಮಂತ ಇಟಗಿ ಆರೋಪ

ವಾರ್ತಾಭಾರತಿವಾರ್ತಾಭಾರತಿ31 Dec 2024 5:06 PM IST
share
Photo of Press meet

ಯಾದಗಿರಿ : ರಾಜ್ಯದಲ್ಲಿ ಹಾಲಿ ಸರ್ಕಾರದ ಆಡಳಿತ ಬಂದಾಗಿನಿಂದ ಸರಕಾರದಲ್ಲಿರುವವರ ಬೆದರಿಕೆಯ ಕಾರಣಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು, ಸರಣಿ ಹಗರಣಗಳು ನಡೆಯುತ್ತಿದ್ದು, ಕಾಂಗ್ರೆಸ್ ರಾಜ್ಯದ ಜನತೆಗೆ ಆತ್ಮಹತ್ಯೆಗಳ ಭಾಗ್ಯ ನೀಡಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಣಮಂತ ಇಟಗಿ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರು ಆತ್ಮಹತ್ಯೆ ದೇಶಾದ್ಯಂತ ಸುದ್ದಿಯಾಗಿದೆ. ಅವರು ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯ ಆಪ್ತ, ರಾಜು ಕಪನೂರನಿಂದ ಕಿರುಕುಳದ ಉಲ್ಲೇಖವಿದೆ ಎಂದು ಅವರು ಹೇಳಿದರು.

ಮುಡಾ, ವಾಲ್ಮೀಕಿ, ಭೋವಿ ಸೇರಿದಂತೆ ಸಾಲು ಸಾಲು ಹಗರಣಗಳು ಅಮಾಯಕರ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಒಂದರ ಮೇಲೆ ಒಂದರಂತೆ ಆಗುತ್ತಿವೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ಚಂದ್ರಶೇಖರ ಆತ್ಮಹತ್ಯೆ, ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ, ದಾವಣಗೆರೆಯಲ್ಲಿ ಗುತ್ತಿಗೆದಾರೊಬ್ಬರ ಆತ್ಮಹತ್ಯೆ, ಮಾಗಡಿಯಲ್ಲಿ ಲಾರಿ ಮಾಲಿಕರೊಬ್ಬರು ಲಂಚ ಕೊಡಲಾಗದೆ ಆತ್ಮಹತ್ಯೆ, ಯಾದಗಿರಿ ಶಾಸಕ ಪರಶುರಾಮ್ ಆತ್ಮಹತ್ಯೆ ಆಗಿವೆ ಈದೀಗ ಸಚಿನ್ ಪಾಂಚಾಳ ಆತ್ಮಹತ್ಯೆಯಾಗಿದೆ ಎಂದು ಅವರು ದೂರಿದರು.

ಈದೀಗ ಈ ಆತ್ಮಹತ್ಯೆ ಡೆತ್ ನೋಟ್ ನಲ್ಲಿ ಕಲಬುರಗಿ ಜಿಲ್ಲೆಯ ಹಿಂದು ಸಮಾಜದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ, ಬಿಜೆಪಿ ನಾಯಕರಾದ ಶಾಸಕ ಬಸವರಾಜ ಮತ್ತಿಮೂಡ, ಚಂದುಪಾಟೀಲ್ ಚಿತ್ತಾಪೂರದ ಮಣಿಕಂಠ ರಾಠೋಡ ಅವರ ಕೊಲೆಗೆ ಮಹಾರಾಷ್ಟ್ರದ ರೌಡಿಗಳಿಗೆ ಸೂಪಾರಿ ಕೊಟ್ಟಿರುವ ಸಂಗತಿ ಬಯಲಾಗಿದೆ. ಈ ಮೂಲಕ ಸರ್ಕಾರ ಆತ್ಮಹತ್ಯೆಗಳನ್ನು ಮಾಡಿಸಲು ಕಾರಣವಾಗಿದ್ದಲ್ಲದೇ ಈದೀಗ ರಾಜಕೀಯ ಪ್ರೇರಿತ ಕೊಲೆಗಳು ಮಾಡಿಸಲು ಮುಂದಾಗಿರುವುದು ಅತ್ಯಂತ ನೀಚ ಸ್ಥರಕ್ಕೆ ಇಳಿಯುತ್ತಿದೆ ಎನ್ನಲು ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ.

ಒಟ್ಟಾರೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಈ ಸರ್ಕಾರ ಆತ್ಮಹತ್ಯೆಗಳನ್ನು, ಕೊಲೆಗಳನ್ನು ಮಾಡಿಸಲೆಂದೇ ಕುಳಿತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ ಅವರು, ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರ ಕೊಲೆಗೆ ಸಂಚು :

ಹಿಂದೂ ಸಮಾಜದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿದ್ದಾಗಿ ಡೆತ್ ನೋಟ್ ತಿಳಿಸಿದೆ. ಸಿದ್ದಲಿಂಗ ಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ಗಳನ್ನು ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಎಲ್ಲ ರೀತಿಯಿಂದಲೂ ರಾಜ್ಯದ ಅತ್ಯಂತ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಪೊಲೀಸ್ ಇಲಾಖೆಯಿಂದ ಸಾಧ್ಯವಿಲ್ಲ. ಹಾಗಾಗಿ ಇದೊಂದು ಗಂಭೀರ ವಿಚಾರ. ಆದ್ದರಿಂದ ಇದರ ಬಗ್ಗೆ ಸಿಬಿಐ ತನಿಖೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ, ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೇಸೂರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X