Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಸಹಕಾರ ಸಂಘಗಳು ರೈತರ...

Yadagiri | ಸಹಕಾರ ಸಂಘಗಳು ರೈತರ ಜೀವನಾಡಿ : ಮಾಲಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ22 Sept 2026 5:37 PM IST
share
Yadagiri | ಸಹಕಾರ ಸಂಘಗಳು ರೈತರ ಜೀವನಾಡಿ : ಮಾಲಿ ಪಾಟೀಲ್

ಯಾದಗಿರಿ: ದೇಶ ಕೃಷಿ ಪ್ರಧಾನವಾಗಿದ್ದು, ಗ್ರಾಮೀಣ ಭಾಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿ ಅವರ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹತ್ತಿಕುಣಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶರಣಪ್ಪಗೌಡ ಮಾಲಿ ಪಾಟೀಲ್ ಹೇಳಿದರು.

ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿರುವ ಸಂಘದ ಆವರಣದಲ್ಲಿ ಮಂಗಳವಾರ ನಡೆದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಘವು ಈ ಸಾಲಿನಲ್ಲಿ ರೈತರಿಗೆ 2.28 ಕೋಟಿ ರೂ. ಬೆಳೆ ಸಾಲ ವಿತರಿಸಿದ್ದು, ರೈತರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರುವುದರಿಂದ ಸಂಘಕ್ಕೆ 7 ಲಕ್ಷ ರೂ. ಲಾಭ ಬಂದಿದೆ ಎಂದು ತಿಳಿಸಿದರು.

ಸಣ್ಣ ವ್ಯಾಪಾರಸ್ಥರಿಗೆ 2.23 ಕೋಟಿ ರೂ. ಸಾಲ ನೀಡುವ ಮೂಲಕ ಅವರ ವ್ಯಾಪಾರ ಅಭಿವೃದ್ಧಿಗೆ ಸಹಕಾರ ನೀಡಲಾಗಿದೆ. ಸಂಘದಲ್ಲಿ ಗ್ರಾಹಕರಿಂದ 1.10 ಕೋಟಿ ರೂ. ಮುದ್ದತ್ ಠೇವಣಿ ಸಂಗ್ರಹಿಸಲಾಗಿದ್ದು, ಆಡಳಿತ ಕಚೇರಿಯನ್ನು ನವೀಕರಿಸಲಾಗಿದೆ. ನ್ಯಾಯಬೆಲೆ ಅಂಗಡಿ ಮೂಲಕ ಅರ್ಹ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದರು.

ಮುಂಗಾರು ಮಳೆ ದುರ್ಬಲವಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೆಚ್ಚುವರಿ ಸಾಲದ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ರೈತರ ನಿಯೋಗದೊಂದಿಗೆ ಕೆವೈಡಿಸಿಸಿ ಕೇಂದ್ರ ಬ್ಯಾಂಕ್, ಕಲಬುರಗಿ ಅಧಿಕಾರಿಗಳನ್ನು ಭೇಟಿ ಮಾಡಿ ಸಂಘಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರು ಹಾಗೂ ಮಹಿಳೆಯರಿಗೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕೆಒಎಫ್ ಅಧ್ಯಕ್ಷ ಶರಣಪ್ಪ ಸೋಮಣ್ಣೋರ ಮಾತನಾಡಿ, ಎಲ್ಲರ ಸಹಕಾರದಿಂದ ಸಂಘ ಉತ್ತಮ ಆರ್ಥಿಕ ವಹಿವಾಟು ನಡೆಸುತ್ತಿದ್ದು, ಜಿಲ್ಲೆಯಲ್ಲಿಯೇ ಉತ್ತಮ ಸಂಘವಾಗಿ ಬೆಳೆಯುತ್ತಿದೆ ಎಂದರು. ರೈತರು, ವ್ಯಾಪಾರಸ್ಥರು ಹಾಗೂ ಮಹಿಳಾ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಣೆ ಮಾಡುವ ಮೂಲಕ ಸಂಘದ ಸೌಲಭ್ಯಗಳನ್ನು ಇನ್ನಷ್ಟು ಜನರಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.

ಸಂಘದ ನಿರ್ದೇಶಕ ಅಮೀನರಡ್ಡಿ ಬಿಳ್ಹಾರ ಮಾತನಾಡಿ, ಗ್ರಾಮ ಹಾಗೂ ಸುತ್ತಮುತ್ತಲಿನ ಆರ್ಥಿಕ ಸಂಪನ್ಮೂಲ ಹೊಂದಿರುವವರು ಸಂಘದಲ್ಲಿ ಠೇವಣಿ ಇಡುವ ಮೂಲಕ ಸಂಘದ ಆರ್ಥಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.

ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವಕುಮಾರ ಪುಟಗಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು.

ಸಮಾರಂಭದಲ್ಲಿ ಸಂಘದಲ್ಲಿ ಠೇವಣಿ ಮಾಡಿದ ಗ್ರಾಹಕರು, ಪಿಗ್ಮಿದಾರರು ಹಾಗೂ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆ ಮೇಲೆ ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ಖಂಡಪ್ಪನೋರ, ಮಾಜಿ ಅಧ್ಯಕ್ಷ ಮಹಿಪಾಲರಡ್ಡಿ ಪಾಟೀಲ್, ನಿರ್ದೇಶಕರಾದ ಬೋಜಣ್ಣಗೌಡ ಯಡ್ಡಳ್ಳಿ, ಬಸವರಾಜ ಕೋಡ್ಲಾ, ಸಾಬರಡ್ಡಿ ತಮ್ಮಣ್ಣೋರ, ನರಸಪ್ಪ ಇದ್ಲಿ, ಸಾಯಿಬಣ್ಣ ಬೊಳೇರ್, ಅಮೃತರಡ್ಡಿ ಪಾಟೀಲ್, ಶರಣಪ್ಪ ಶಂಕ್ರಪ್ಪನೋರ, ಯಲ್ಲಮ್ಮ ತಮ್ಮಣ್ಣೋರ, ಭೀಮವ್ವ ಸಮನಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾಬಣ್ಣ ಯಾದಗಿರಿ ನಿರೂಪಿಸಿ, ಸ್ವಾಗತಿಸಿದರು. ಅಲ್ಲಾಭಕ್ಷ್ ವಂದಿಸಿದರು.

Tags

yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X