Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಪರಿಶಿಷ್ಟ ಜಾತಿ-ಪಂಗಡ ಜನರ...

Yadagiri | ಪರಿಶಿಷ್ಟ ಜಾತಿ-ಪಂಗಡ ಜನರ ಮೂಲಸೌಕರ್ಯ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Sept 2026 5:44 PM IST
share
Yadagiri | ಪರಿಶಿಷ್ಟ ಜಾತಿ-ಪಂಗಡ ಜನರ ಮೂಲಸೌಕರ್ಯ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಡಿಸಿ ಸೂಚನೆ

ಯಾದಗಿರಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳ ಸ್ಮಶಾನ ಭೂಮಿಗಳ ಒತ್ತುವರಿ ತೆರವುಗೊಳಿಸುವುದು, ಅಗತ್ಯವಿರುವ ಕಡೆಗಳಲ್ಲಿ ಸ್ಮಶಾನ ಭೂಮಿಗೆ ಕಂಪೌಂಡ್, ತಂತಿಬೇಲಿ ಹಾಗೂ ನಾಮಫಲಕ ಅಳವಡಿಸುವುದು ಮತ್ತು ಈ ಸಮುದಾಯಗಳಿಗೆ ಕುಡಿಯುವ ನೀರಿನ ಬೋರ್‌ವೆಲ್ ಸೌಲಭ್ಯ ಕಲ್ಪಿಸುವ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026–27ನೇ ಸಾಲಿನ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡ (ದೌರ್ಜನ್ಯ ನಿಯಂತ್ರಣ) ಕಾಯ್ದೆ–1995ರ ನಿಯಮ 17ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಾಮನಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿಗೆ ರಸ್ತೆ ಸಂಪರ್ಕ ಹಾಗೂ ಸಂರಕ್ಷಣೆ ಕುರಿತು ಪರಿಶೀಲನೆ ನಡೆಸಬೇಕು. ಬೋನಾಳ ಮತ್ತು ಕಾಂತಪುರ ಗ್ರಾಮಗಳ ಅಪೂರ್ಣ ಕಾಮಗಾರಿಗಳನ್ನು ತ್ವರಿತವಾಗಿ ಪರಿಶೀಲಿಸಿ ಪೂರ್ಣಗೊಳಿಸಬೇಕು. ಸುರಪುರ ನಗರಸಭೆ ವ್ಯಾಪ್ತಿಯ ಹಲಕಲ್ ವಾರ್ಡ್‌ನ ರುದ್ರಭೂಮಿ ಮಂಜೂರಾತಿ ಕುರಿತು ಅಗತ್ಯ ಮಾಹಿತಿಯೊಂದಿಗೆ ಅಧಿಕಾರಿಗಳು ತಮ್ಮೊಂದಿಗೆ ಚರ್ಚಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಸುರಪುರ, ಶಹಾಪುರ, ಯಾದಗಿರಿ, ವಡಗೇರಾ, ಹುಣಸಗಿ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಮಹರ್ಷಿ ವಾಲ್ಮೀಕಿ ಭವನಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ನಿವೇಶನ ಸಮಸ್ಯೆಗಳಿದ್ದರೆ ಅವುಗಳನ್ನು ಬಗೆಹರಿಸಿ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.

ಯಾದಗಿರಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಅಂಬೇಡ್ಕರ್ ನಗರಕ್ಕೆ 8ರಿಂದ 10ನೇ ತರಗತಿಯ ಶಾಲೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಕೆಕೆಆರ್‌ಡಿಬಿ ಹಾಗೂ ಸಿಎಸ್‌ಆರ್ ನೆರವಿನಿಂದ ಶಾಲಾ ಸೌಲಭ್ಯ ಕಲ್ಪಿಸುವ ಕುರಿತು ಸೂಕ್ತ ಗಮನ ಹರಿಸಲಾಗುವುದು ಎಂದು ಹೇಳಿದರು.

ಯೀಮ್ಸ್‌ನಲ್ಲಿ ಡಿ-ಗ್ರೂಪ್ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಮೀಸಲಾತಿ ರೋಸ್ಟರ್ ಪಾಲನೆ ಕುರಿತ ದಾಖಲೆಗಳನ್ನು ಪರಿಶೀಲಿಸಬೇಕು. ಇತ್ತೀಚೆಗೆ ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕಿ ಅಂಜಲಿ ಅವರ ವಿಶೇಷ ಚೇತನ ಮಗುವಿಗೆ ಯುಡಿಐಡಿ ಕಾರ್ಡ್ ವಿತರಣೆ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಬಹುತೇಕ ಕಾಮಗಾರಿಗಳನ್ನು ಕೆಆರ್‌ಐಡಿಎಲ್ ಮೂಲಕ ಕೈಗೊಳ್ಳಲಾಗುತ್ತಿದ್ದು, ಮುಂಬರುವ ಡಿಸೆಂಬರ್ ಒಳಗೆ ಎಲ್ಲ ಚಾಲ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸಭೆಗೆ ಗೈರುಹಾಜರಾಗಿದ್ದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ 2026–27ನೇ ಸಾಲಿನಲ್ಲಿ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 28 ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ ಒಟ್ಟು 69.72 ಲಕ್ಷ ರೂ. ಪರಿಹಾರಧನ ವಿತರಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ಸಭೆಗೆ ಅಗತ್ಯ ಮಾಹಿತಿ ನೀಡಿದರು. ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಮರೆಪ್ಪ ಚಟ್ಟೆರಕರ್ ಮತ್ತು ನಿಂಗಪ್ಪ ಅವರು ಸಮುದಾಯದ ವಿವಿಧ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚನ್ನಬಸಪ್ಪ ಸ್ವಾಗತಿಸಿ ಇಲಾಖೆಯ ಪ್ರಗತಿ ವಿವರಿಸಿದರು.

ಅನುದಾನದ ಸದ್ಬಳಕೆಗೆ ಸೂಚನೆ :

ಸಭೆಯ ಬಳಿಕ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಅಕ್ಟೋಬರ್ ಅಂತ್ಯದೊಳಗೆ ಗರಿಷ್ಠ ಪ್ರಮಾಣದಲ್ಲಿ ವೆಚ್ಚ ಮಾಡಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅನುದಾನದ ಸಮರ್ಪಕ ಬಳಕೆ ಹಾಗೂ ಕಾಮಗಾರಿಗಳ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

Tags

SC/STyadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X