Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಡ, ಮಧ್ಯಮ ವರ್ಗದ ಜನರಿಗೆ...

ಯಾದಗಿರಿ | ಬಡ, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಿ : ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ವಾರ್ತಾಭಾರತಿವಾರ್ತಾಭಾರತಿ21 Feb 2025 7:38 PM IST
share
ಯಾದಗಿರಿ | ಬಡ, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಿ : ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ಯಾದಗಿರಿ : ಪ್ರಧಾನಮಂತ್ರಿಗಳ ವಿಶೇಷ ಕಾರ್ಯಕ್ರಮಗಳಡಿಯ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳು ಒಳಗೊಂಡಿದ್ದು, ಯಾದಗಿರಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸುವಂತೆ ಭಾರತ ಸರ್ಕಾರದ ಹಣಕಾಸು ಸೇವೆಗಳ, ಜಂಟಿಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದ ಹಿಂದುಳಿದ 112 ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ, ವಿವಿಧ ಕ್ಷೇತ್ರಗಳಲ್ಲಿ ಯಾದಗಿರಿ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ನೀತಿ ಆಯೋಗ ಗುರಿ ನಿಗದಿಪಡಿಸಿದೆ. ಜನರ ಆರೋಗ್ಯ ಮತ್ತು ಪೌಷ್ಟಿಕ, ಕೃಷಿ ಮತ್ತು ಜಲ ಸಂಪನ್ಮೂಲ, ಶಿಕ್ಷಣ, ಆರ್ಥಿಕ ಸೇರ್ಪಡೆ ಹಾಗೂ ಕೌಶಲಾಭಿವೃದ್ಧಿ ಮತ್ತು ಮೂಲಸೌಕರ್ಯಗಳ ಕುರಿತು 49 ಸೂಚ್ಯಂಕ ನೀಡಲಾಗಿದೆ.ಇವುಗಳಲ್ಲಿ ಸೂಕ್ತ ಪ್ರಗತಿ ಸಾಧಿಸಲು ಸಂಬಂಧಿಸಿದ ಅಧಿಕಾರಿಗಳು ಜವಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು.

ವಿಶೇಷವಾಗಿ ಬಡಜನರು,ಮಧ್ಯಮ ವರ್ಗದವರಿಗಾಗಿ ಪಿ.ಎಮ್ ಸ್ವನಿಧಿ, ಮುದ್ರಾ, ಹಾಗೂ ವಿಶ್ವಕರ್ಮ ಯೋಜನೆಗಳತ್ತ ಹೆಚ್ಚಿನ ಗಮನಹರಿಸಬೇಕು .ಅದರಂತೆ ಪ್ರಧಾನ ಮಂತ್ರಿಗಳ ಜೀವನ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳು ಕಡುಬಡವರಿಗೆ ಉಪಯುಕ್ತವಾಗಿವೆ.ಈ ಕುರಿತು ಲೀಡ್ ಬ್ಯಾಂಕ್ ಅಧಿಕಾರಿಗಳು ವಿಶೇಷ ಅಭಿಯಾನದ ಮೂಲಕ ಅರಿವು ಮತ್ತು ಪ್ರೋತ್ಸಾಹ ನೀಡಬೇಕು. ಸರ್ಕಾರದ ಪ್ರತಿ ಇಲಾಖೆ ಸಿಬ್ಬಂದಿಗಳು ಹಾಗೂ ಅಧಿಕಾರಿಗಳೂ ಈ ಯೋಜನೆಗಳಡಿ ಬರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಲೀಡ್ ಬ್ಯಾಂಕ್ ಮೂಲಕ ಮುದ್ರಾ ಯೋಜನೆಯಡಿ ಜಿಲ್ಲೆಯ ಜನಸಂಖ್ಯೆ ಗೆ ಅನುಗುಣವಾಗಿ ಸಾಲ ಸೌಲಭ್ಯ ಕಲ್ಪಿಸಬೇಕು. ಈವರೆಗೆ ಸಾಧಿಸಿದ ಪ್ರಗತಿ ವರದಿ ಜಿ.ಪಂ ಸಿಇಓ ಅವರಿಗೆ ನೀಡಿ ಎಷ್ಟು ಜನ ಫಲಾನುಭವಿಗಳು ಈ ಯೋಜನೆಯಡಿ ಲಾಭ ಪಡೆದಿದ್ದಾರೆ ಎಂಬುದರ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದರು. ಅದರಂತೆ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಲೀಡ್ ಬ್ಯಾಂಕ್ಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಸ್ವಸಹಾಯ ಗುಂಪುಗಳಿಗೆ ನೀಡಲಾಗುತ್ತಿರುವ ಸಾಲ ಸೌಲಭ್ಯ ಗಳ ಬಗ್ಗೆ ಪರಿಶೀಲಿಸಿ ನಿಖರ ಮಾಹಿತಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ವಿಶೇಷ ಯೋಜನೆಗಳ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಗಮನ ನೀಡುವಂತೆ ಅವರು ಸೂಚನೆ ನೀಡಿ, ಫಲಿತಾಂಶ ಕಡಿಮೆ ಕುರಿತು ಯಾವುದೇ ರೀತಿಯ ಕಾರಣಗಳನ್ನು ನೀಡದೆ ಪರಿಣಾಮಕಾರಿ ಯೋಜನೆ ರೂಪಿಸಲು ಅವರು ಸೂಚಿಸಿದರು.

ಕಡಿಮೆ ತೂಕದ ಶಿಶುಗಳ ಜನನವನ್ನು ಶೇಕಡಾವಾರು ಕಡಿಮೆ ಮಾಡುವಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡ ಕ್ರಮಗಳು, ಅಪೌಷ್ಠಿಕತೆ ನಿವಾರಣೆ, ಐಸಿಡಿಎಸ್ ಕಾರ್ಯಕ್ರಮದ ಅಡಿಯಲ್ಲಿ ನಿಯಮಿತವಾಗಿ ಪೂರಕ ಪೌಷ್ಟಿಕಾಂಶವನ್ನು ಪಡೆಯುವ ಮಹಿಳೆಯರ ಸಂಖ್ಯೆ ಮತ್ತು ರೋಗಿಗಳಿಗೆ ಒದಗಿಸಲಾದ ಪ್ರೋಟೀನ್-ಭರಿತ ಆಹಾರಗಳ ಕುರಿತು, ಶಿಕ್ಷಣ, ಕೃಷಿ ಮತ್ತು ಜಲಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಮೂಲಭೂತ ಮೂಲಸೌಕರ್ಯಗಳಂತಹ ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಮತ್ತು ಸವಾಲುಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದಕ್ಕೂ ಮುನ್ನ ಅವರು ದೋರನಹಳ್ಳಿ ಅಂಗನವಾಡಿ ,ಹಾಗೂ ನಾಯ್ಕಲ್ ಗ್ರಾಮದ ಗ್ರಂಥಾಲಯ, ಪರಿಶೀಲಿಸಿದರು. ಈ ಭೇಟಿ ವೇಳೆ ಹಾಗೂ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಹಾಗೂ ಸಹಾಯಕ ಆಯುಕ್ತರಾದ ಶ್ರೀ ಹಂಪಣ್ಣ ಸಜ್ಜನ್ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X