Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಹಳ್ಳದ ಬ್ರಿಜ್ ಸೇತುವೆ...

ಯಾದಗಿರಿ | ಹಳ್ಳದ ಬ್ರಿಜ್ ಸೇತುವೆ ಅಗಲೀಕರಣಕ್ಕೆ ಸಮತಾ ಸೈನಿಕ ದಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Sept 2026 6:55 PM IST
share
ಯಾದಗಿರಿ | ಹಳ್ಳದ ಬ್ರಿಜ್ ಸೇತುವೆ ಅಗಲೀಕರಣಕ್ಕೆ ಸಮತಾ ಸೈನಿಕ ದಳ ಆಗ್ರಹ

ಯಾದಗಿರಿ: ಬೀದರ್-ಬೆಂಗಳೂರು ರಾಜ್ಯ ಹೆದ್ದಾರಿಯ ಹತ್ತಿಗೂಡೂರು ಗ್ರಾಮದ ಹಳ್ಳದ ಬ್ರಿಜ್ ಸೇತುವೆ ಇಕ್ಕಟ್ಟಾಗಿರುವುದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಸೇತುವೆಯನ್ನು ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಹತ್ತಿಗೂಡೂರು ಶರಣರೆಡ್ಡಿ ಒತ್ತಾಯಿಸಿದ್ದಾರೆ.

ಶಹಾಪುರ ತಾಲ್ಲೂಕಿನ ಹತ್ತಿಗೂಡೂರು ಮಾರ್ಗವು ಬೆಂಗಳೂರು ಸೇರಿದಂತೆ ನೆರೆಯ ಜಿಲ್ಲೆಗಳು ಹಾಗೂ ಪಕ್ಕದ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಹಳ್ಳದ ಬ್ರಿಜ್ ಸೇತುವೆ ಕಿರಿದಾಗಿರುವ ಕಾರಣ ಎದುರುಬದುರಾಗಿ ಬರುವ ವಾಹನಗಳು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಸೇತುವೆ ಮೇಲೆ ವಾಹನಗಳು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿ ಹಲವು ಬಾರಿ ಮುಖಾಮುಖಿ ಢಿಕ್ಕಿ ಸಂಭವಿಸಿ ಅಪಘಾತಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ.

ಸೆ.1ರಂದು ನಾಲ್ಕು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಪ್ರಯಾಣಿಕರು ಹಾಗೂ ಸ್ಥಳೀಯ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸಿದರು. ಕೆಲವರು ವಾಹನಗಳಿಂದ ಇಳಿದು ಹಲವು ಕಿ.ಮೀ. ನಡೆದುಕೊಂಡು ಹೋಗುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಇಂತಹ ಘಟನೆಗಳು ಪದೇಪದೆ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಶ್ವತ ಪರಿಹಾರಕ್ಕೆ ಮುಂದಾಗದಿರುವುದು ಬೇಸರದ ಸಂಗತಿ ಎಂದು ಶರಣರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೇತುವೆ ಬಳಿ ಅಧಿಕಾರಿಗಳು ಕೇವಲ ಸ್ಪೀಡ್ ಬ್ರೇಕರ್ ಅಳವಡಿಸಿ ಕೈತೊಳೆದುಕೊಂಡಿದ್ದಾರೆ. ರಾತ್ರಿ ವೇಳೆ ಸ್ಪೀಡ್ ಬ್ರೇಕರ್ ಸರಿಯಾಗಿ ಕಾಣಿಸದಿರುವುದರಿಂದ ದ್ವಿಚಕ್ರ ವಾಹನ ಹಾಗೂ ಸಣ್ಣ ಕಾರುಗಳ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಹಲವರು ಗಾಯಗೊಂಡು ಕೈಕಾಲು ಮುರಿದುಕೊಂಡಿರುವ ಘಟನೆಗಳು ನಡೆದಿವೆ. ಹೀಗಾಗಿ ಕೇವಲ ಸ್ಪೀಡ್ ಬ್ರೇಕರ್ ಅಳವಡಿಸುವ ಬದಲು ಸೇತುವೆಯನ್ನು ವೈಜ್ಞಾನಿಕವಾಗಿ ಅಗಲೀಕರಣಗೊಳಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಳ್ಳದ ಬ್ರಿಜ್ ಸೇತುವೆ ಅಗಲೀಕರಣಕ್ಕೆ ತಕ್ಷಣ ಕ್ರಮ ಕೈಗೊಂಡು, ಅಪಘಾತ ಹಾಗೂ ನಿತ್ಯದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ವಾಹನ ಸವಾರರು ಮತ್ತು ಗ್ರಾಮಸ್ಥರನ್ನು ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.


Tags

YadagiriSamata Sainik Dal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X