ಯಾದಗಿರಿ | ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಡಾ.ಸುಶೀಲಾ ಬಿ.
ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ಆಚರಣೆಯನ್ನು ಜೂ.27ರ ಶುಕ್ರವಾರದಂದು ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ತಿಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವವನ್ನು ಜಿಲ್ಲಾಡಳಿತ ಹಾಗೂ ಯಾದಗಿರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಗುತ್ತಿದೆ.
ಕೆಂಪೇಗೌಡ ಜಯಂತಿಯನ್ನು ಜಿಲ್ಲಾ, ತಾಲ್ಲೂಕು ಮಟ್ಟದ ಎಲ್ಲಾ ಕಚೇರಿಗಳಲ್ಲಿ, ತಾಲ್ಲೂಕು, ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲಾ ಅನುದಾನಿತ, ಅರೆ ಅನುದಾನಿತ ಹಾಗೂ ಸರಕಾರಿ ಶಾಲಾ ಕಾಲೇಜುಗಳಲ್ಲಿ ಮತ್ತು ತಮ್ಮ ಅಧೀನ ಕಚೇರಿಗಳಲ್ಲಿ ಈ ಜಯಂತಿಯನ್ನು ಅರ್ಥಪೂರ್ಣವಾಗಿ ಗೌರವಯುತವಾಗಿ ಆಚರಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





