ಯಾದಗಿರಿ | ಫೆ.14, 15ರಂದು ಸರಕಾರಿ ಆಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸೆ ಶಿಬಿರ

ಸುರಪುರ : ಸರ್ಕಾರಿ ಆಸ್ಪತ್ರೆಯಲ್ಲಿ ಫೆ.14, 15 ರಂದು ಎರಡು ದಿನ ಉಚಿತವಾಗಿ ನೇತ್ರ ಶಸ್ತ್ರ ಚಿಕಿತ್ಸೆಯ ಶಿಬಿರವನ್ನು ಶಾಸಕ ರಾಜಾ ವೇಣುಗೋಪಾಲ್ ನಾಯಕ ಅವರು ಉದ್ಘಾಟಿಸುವರು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ಅವರು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬುಧುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ತಾಲೂಕು ಆರೋಗ್ಯ ಹಾಗೂ ಲಾಯನ್ಸ್ ಕ್ಲಬ್, ವಿವೇಕಾನಂದ ಸೇವಾಶ್ರಮ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಶಿಬಿರದಲ್ಲಿ ಸುಮಾರು 500 ನೇತ್ರ ಶಸ್ತ್ರ ಚಿಕಿತ್ಸೆ ಮಾಡುವ ಗುರಿ ಹೊಂದಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಬಿರಾದಾರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಪದ್ಮಾನಂದ ಗಾಯಕವಾಡ ಉಪಸ್ಥಿತರಿರುವರು ಎಂದರು.
ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು. ಸಮಯಕ್ಕೆ ಸರಿಯಾಗಿ ನೇತ್ರ ಶಸ್ತ್ರಚಿಕಿತ್ಸೆಗೆ ಬರಬೇಕು. ತಡವಾಗಿ ಬಂದರೆ ಅವಕಾಶವಿರುವುದಿಲ್ಲ. ವೈದ್ಯರು ಮತ್ತು ಸ್ವಯಂ ಸೇವಕರೊಂದಿಗೆ ಸಹಕರಿಸಬೇಕು ಬರುವಾಗ ತಟ್ಟೆ, ಲೋಟ ತರಬೇಕು, ಲೈನ್ಸ್ ಕ್ಲಬ್ ನವರು ಉಚಿತ ಊಟೋಪಚಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುತ್ತಾರೆ ಎಂದರು.
ಎಸ್ಎಮ್ಒ ಅನೀಲ್ ತಾಳಿಕೋಟೆ, ಲೈನ್ಸ್ ಕ್ಲಬ್ ಕಾರ್ಯದರ್ಶಿ ಪಂಕಜ ಜೋಷಿ, ಸಿದ್ದಯ್ಯ ಸ್ವಾಮಿ ಉಪಸ್ಥಿತರಿದ್ದರು.







