Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿದ್ಯಾರ್ಥಿಗಳಲ್ಲಿನ ಪ್ರತಿಭೆ...

ಯಾದಗಿರಿ | ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

ವಾರ್ತಾಭಾರತಿವಾರ್ತಾಭಾರತಿ4 Jan 2025 6:49 PM IST
share
Photo of Program

ಯಾದಗಿರಿ : ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಅವರ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಹಿಂದುಳಿದ ಜಿಲ್ಲೆಯವರು ಎಂಬುವ ವಿದ್ಯಾರ್ಥಿಗಳಲ್ಲಿನ ಮನಸ್ಥಿಯನ್ನು ಬದಲಾಯಿಸಲು ಪ್ರಯತ್ನಿಸುವಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಶಿಕ್ಷಕರಿಗೆ ಕರೆ ನೀಡಿದರು.

ನಗರದ ತಿಮ್ಮಣ್ಣ ಹೆಡಗಿಮದ್ರಿ ಇಂಟರ್ನ್ಯಾಷನಲ್ ಸ್ಕೂಲ್, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗದ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂದೆ ಬರಬೇಕು. ಪರೀಕ್ಷೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ವಿಶೇಷ ತರಬೇತಿ ನೀಡಿ ಮುಂದೆ ಬರುವಂತೆ ನೋಡಿಕೊಳ್ಳಲು ಶಿಕ್ಷಕರು ಹಾಗೂ ಪಾಲಕರಿಗೆ ಕರೆ ನೀಡಿದ ಅವರು, ವಿದ್ಯಾರ್ಥಿಗಳೂ ಸಹ ಅಧ್ಯಯನದಲ್ಲಿ ವಿಶೇಷ ಗಮನ ನೀಡುವಂತೆ ಸಲಹೆ ನೀಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ದೀಪದ ಕರ್ಪುರದಂತೆ ನೆರವಾಗಬೇಕು. ಎಸೆಸೆಲ್ಸಿ ಫಲಿತಾಂಶದಲ್ಲಿ ಶೇ.90 ರಷ್ಟು ಅಂಕ ಪಡೆಯುವ ದಿಸೆಯಲ್ಲಿ ಸನ್ನದ್ಧಗೊಳಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಸದಾ ನೆರವಾಗಿ ನಿಂತಿದ್ದು, ಅಕ್ಷರಜ್ಞಾನ ಹೆಚ್ಚಿಸಲು ಮತ್ತು ಪ್ರೋತ್ಸಾಹಿಸಲು ಈ ಭಾಗದ ಎಲ್ಲ ಜನಪ್ರತಿನಿಧಿಗಳು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ ಒರಡಿಯಾ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳಲ್ಲಿನ ಹಿಂದುಳಿದ ಭಾಗದವರು ಎಂಬ ಮನಸ್ಥಿತಿ ಹೋಗಬೇಕು. ಇಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಬೇಕು. ವಿದ್ಯಾರ್ಥಿಗಳೂ ಸಹ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ, ಸಾಧನೆ ತೋರುವಂತೆ ಕರೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ. ಸಿ.ಎಸ್.ಮುದೋಳ್ ಮಾತನಾಡಿ. ಎಸೆಸೆಲ್ಸಿ ಪರೀಕ್ಷೆಗೆ ಇನ್ನೂ ಕೇವಲ 74 ದಿನಗಳು ಉಳಿದಿವೆ. ಕಾರಣ ಹೈಸ್ಕೂಲ್ ಶಿಕ್ಷಕರಿಗೆ ಬೇರೆ ಯಾವ ಕೆಲಸಗಳನ್ನು ಹಚ್ಚುವುದು ಬೇಡ ಎಂದು ಹೇಳಿ, ದಿನನಿತ್ಯ ವಿದ್ಯಾರ್ಥಿಗಳ ಪ್ರತಿಭೆ, ಫಲಿತಾಂಶ ಸುಧಾರಣೆಗೆ ಗಮನ ನೀಡಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರಾದ ಜಿ.ಎಂ.ವ್ರೃಷಬೆಂದ್ರಯ್ಯ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿನಾಯಕ ಮಾಲಿ ಪಾಟೀಲ್, ಕರ್ನಾಟಕ ರಾಜ್ಯ ಪ್ರೌಡ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಕುಮಾರ ಕೆಂಭಾವಿ, ತಾಲೂಕು ಅಧ್ಯಕ್ಷ ಶರಣಗೌಡ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಹೊಸಮನಿ, ಲಿಪಿಕ ನೌಕರರ ಸಂಘದ ಅಧ್ಯಕ್ಷ ಆದೆಪ್ಪ ಬಾಗ್ಲಿ, ತಿಮ್ಮಣ್ಣ ಹೆಡಗಿಮದ್ರಿ ಇಂಟರ್ ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಅನೀಲ ಕುಮಾರ ಹೆಡಗಿಮದ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಬಿ ಪಾಟೀಲ್, ಶಿಕ್ಷಣ ಸಂಯೋಜಕ ಕಿಶನ್ ಪವಾರ್, ವಿಷಯ ಪರಿವಿಕ್ಷಕ ಬಸನಗೌಡ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಚಿತ್ರಶೇಖರ, ಸ್ಥಳೀಯ ಸಿಆರ್ ಪಿ ರವಿಚಂದ್ರ ನಾಯ್ಕಲ್, ಮುಖ್ಯಗುರುಗಳಾದ ಪುಷ್ಪಾಂಜಲಿ ಮಹಾಬಳೆಶ್ವರ, ಸಾನೀಯಾ ಸೈಯದ್ ಸೇರಿದಂತೆ ವಿವಿಧ ಶಾಲೆಯ ಮಕ್ಕಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X