Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಗರದಲ್ಲಿ ನೂತನ ಪೊಲೀಸ್...

ಯಾದಗಿರಿ | ನಗರದಲ್ಲಿ ನೂತನ ಪೊಲೀಸ್ ಠಾಣೆ, ವಸತಿಗೃಹಗಳ ಉದ್ಘಾಟನೆ

ರಾಜ್ಯದ ಎಲ್ಲ ಪೋಲಿಸ್ ಠಾಣೆಗಳ ಆಧುನೀಕರಣಕ್ಕೆ ವಿಶೇಷ ಗಮನ : ಸಚಿವ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ27 Jan 2025 6:51 PM IST
share
Photo of Program

ಯಾದಗಿರಿ : ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳನ್ನು ಆಧುನಿಕರಣಗೊಳಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.

ನಗರದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ, ರಾಜ್ಯ ಪೊಲೀಸ್ ಇಲಾಖೆ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, 17 ಕೋಟಿ ರೂ. ವೆಚ್ಚದ ಪೊಲೀಸ್ ವಸತಿ ಗೃಹಗಳು ಹಾಗೂ 2.12 ಕೋಟಿ ರೂ. ವೆಚ್ಚದ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕತೆಗೆ ತಕ್ಕಂತೆ ರಾಜ್ಯದಲ್ಲಿರುವ ಸುಮಾರು 1,000 ಪೋಲಿಸ್ ಠಾಣೆಗಳನ್ನು ಆಧುನಿಕರಣ ಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ವಿವಿಧ ಪೊಲೀಸ್ ಠಾಣೆಗಳ ಮೇಲೆ ಬೆಂಗಳೂರಿನಿಂದಲೇ ನಿಗಾ ಇಡುವಂತಹ ವ್ಯವಸ್ಥೆ ಜೊತೆಗೆ ಎಲ್ಲ ಪೊಲೀಸ್ ಠಾಣೆಗಳನ್ನು ತಾಂತ್ರಿಕವಾಗಿ ಅತ್ಯಾಧುನಿಕರಣಗೊಳಿಸಲು ಸರಕಾರ ಹಾಗೂ ಮಾನ್ಯ ಮುಖ್ಯಮಂತ್ರಿಗಳು ದೂರ ದೃಷ್ಟಿ ಹೊಂದಿದ್ದಾರೆ ಎಂದು ಹೇಳಿದರು.

ಪೊಲೀಸ್ ಇಲಾಖೆ ಹಾಗೂ ಸಿಬ್ಬಂದಿಗಳ ಕರ್ತವ್ಯವು ಅತ್ಯಂತ ಸೂಕ್ಷ್ಮವಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದಲೇ ಅಂತ್ಯ ಮಾಡಲಾಗುತ್ತದೆ. ಇದಕ್ಕಾಗಿ ಪೊಲೀಸ್ ಇಲಾಖೆ ಇನ್ನಷ್ಟು ಬಲಗೊಳಿಸಲು ರಾಜ್ಯಾದ್ಯಂತ ಒಟ್ಟು 1,000 ಸಬ್ ಇನ್ ಸ್ಪೆಕ್ಟರ್ ಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಹಗರಣದಿಂದಾಗಿ ನೆನೆಗುದಿಗೆ ಬಿದ್ದಿದ್ದ 402 ಸಬ್ ಇನ್ ಸ್ಪೆಕ್ಟರ್ ಗಳ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪೋಲಿಸರು ಜನಸ್ನೇಹಿಗಳಾಗಿ ಕಾನೂನಿನ ಅನ್ವಯ ಕಾರ್ಯನಿರ್ವಹಿಸಬೇಕು. ಕಷ್ಟದಲ್ಲಿ ಬರುವ ಸಾರ್ವಜನಿಕರಿಗೆ ಸ್ನೇಹಿತರಾಗಿ ವರ್ತಿಸಬೇಕು. ವಿಶೇಷವಾಗಿ ಹೆಣ್ಣು ಮಕ್ಕಳನ್ನು ಗೌರವಾದಿಂದ ನೋಡಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಾರ್ವಜನಿಕರು ಕೂಡ 24 ಗಂಟೆಗಳ ಕಾಲ ದಿನನಿತ್ಯ ಸೇವೆಯಲ್ಲಿರುವ ಪೊಲೀಸ್ ಸಿಬ್ಬಂದಿಗಳಿಗೂ ಗೌರವ ನೀಡುವಂತೆ ಸಲಹೆ ನೀಡಿದರು.

ಯಾದಗಿರಿ ನಗರ ಪೊಲೀಸ್ ಠಾಣೆ ಉನ್ನತೀಕರಿಸುವ ಬೇಡಿಕೆ ಇದ್ದು, ಅದನ್ನು ಈಡೇರಿಸಲಾಗುವುದು. ಅದರಂತೆ ಖಾನಾಪುರ್ ಪೊಲೀಸ್ ಠಾಣೆ, ಗುರುಮಿಟ್ಕಲ್ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಸಂಬಂಧಪಟ್ಟಂತೆ ನಿಯಮಾವಳಿಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಕ್ಕೇರ ಔಟ್ ಪೋಸ್ಟ್ ಪೋಲೀಸ್ ಠಾಣೆ ಉನ್ನತಿಕರಣಗೊಳಿಸುವ ಬಗ್ಗೆ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಪೊಲೀಸ್ ಪರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆದವರಿಗೆ, ಕಾನೂನನ್ನು ಉಲ್ಲಂಘಿಸಿ ಕಿರುಕುಳ ನೀಡಿದವರ ಬಂಧನಕ್ಕೆ ಸೂಚಿಸುವ ಜೊತೆಗೆ ಅವರ ಲೈಸೆನ್ಸ್ ರದ್ದತಿಗೂ ಸೂಚಿಸಲಾಗಿದೆ. ಅನಧಿಕೃತವಾಗಿ ನಡೆಸುವಂತಹ ಫೈನಾನ್ಸ್ ಗಳ ವಿರುದ್ಧ ಕಾನೂನಿನ ರೀತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದೂರು ಬಂದಲ್ಲಿ ಅಥವಾ ಸೊ-ಮೋಟೊ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ ಅವರು, ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕಾಗಿ ಬಡವರು, ದೀನ ದಲಿತರು, ಶೋಷಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಯುವ ಜನಾಂಗ ನೆಮ್ಮದಿಯ ಬದುಕು ಸಾಗಿಸಲು ನೆರವಾಗಿದೆ ಎಂದು ಹೇಳಿದರು.

ಈ ಹಿಂದೆ ಇದ್ದ ಮಾನ್ಯ ಸಿದ್ದರಾಮಯ್ಯನವರ ಸರಕಾರದ ಅವಧಿಯಲ್ಲಿ 65,000 ಕೋಟಿ ರೂ. ಗಳನ್ನು ನೀರಾವರಿಗೆ ಒದಗಿಸಿ ನಾಲ್ಕು ಲಕ್ಷ. ಹೆಕ್ಟೆರ್ ಭೂಮಿಗೆ ನೀರಾವರಿ ಕಲ್ಪಿಸಲಾಗಿದೆ. ಹೈದರಾಬಾದ್ ಕರ್ನಾಟಕದ ಶೈಕ್ಷಣಿಕ ಮತ್ತು ನಿರುದ್ಯೋಗಿಗಳ ಅನುಕೂಲಕ್ಕಾಗಿ 371 (ಜೆ) ಜಾರಿಗೊಳಿಸಲಾಗಿದೆ. ಈಗಿನ ರಾಜ್ಯ ಸರಕಾರ ಅನ್ನ ಭಾಗ್ಯ ಯೋಜನೆ ಅಡಿ 9,775 ಕೋಟಿ ರೂ. ಒದಗಿಸಿದೆ.

ಯಾದಗಿರಿ ಜಿಲ್ಲೆಗೆ 212 ಕೋಟಿ ರೂ. ಒದಗಿಸಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ತಲಾ 2,000 ರೂ.ಗಳಂತೆ ತಾಯಂದಿರಿಗೆ ಜಮೆ ಮಾಡಲಾಗಿದೆ. ಧಾರ್ಮಿಕ ಕ್ಷೇತ್ರಗಳ ಪ್ರವಾಸಕ್ಕಾಗಿ 10 ಸಾವಿರ ಕೋಟಿ ರೂ. ವ್ಯಯಮಾಡಿದೆ. ಗೃಹ ಜ್ಯೋತಿ ಯೋಜನೆಗೆ 2,000 ಕೋಟಿ ರೂ. ಒದಗಿಸಿದೆ. ಯುವ ನಿಧಿ ಯೋಜನೆ ಅಡಿ 400 ಕೋಟಿ ರೂ. ಸೇರಿದಂತೆ ಈವರೆಗೆ 58,000 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು.

ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ್ ಅವರು ಮಾತನಾಡಿ, ರಾಜ್ಯ ಸರಕಾರ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದೆ. ಆರ್ಥಿಕವಾಗಿ ಬಡವರಿಗೆ ಶಕ್ತಿ ತುಂಬುವ ಕಾರ್ಯ ಮಾಡಿದೆ. 4 ಲಕ್ಷ ಹೆಕ್ಟರ್ ಪ್ರದೇಶವನ್ನು ನೀರಾವರಿ ಗೊಳಿಸಿದೆ. 371 (ಜೆ) ಜಾರಿಗೊಳಿಸಿ, ನಿರುದ್ಯೋಗಿ ಯುವಕರಿಗೆ ಉದ್ಯೋಗ ಹಾಗೂ ಶಿಕ್ಷಣಕ್ಕೆ ನೆರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಮಾತನಾಡಿ, ನಗರ ಪೊಲೀಸ್ ಠಾಣೆ ಉನ್ನತೀಕರಣಗೊಳಿಸಬೇಕು. ಖಾನಾಪುರದಲ್ಲಿ ಪೊಲೀಸ್ ಠಾಣೆ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಶರಣಗೌಡ ಕಂದಕೂರು, ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ್, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಬುರಾವ್ ಚಿಂಚನಸೂರ್, ನಗರಸಭೆ ಅಧ್ಯಕ್ಷರಾದ ಲಲಿತ ಅನಪುರ್, ನರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ವಿನಾಯಕ್ ಪಾಟೀಲ್, ಕಲಬುರಗಿ ಈಶಾನ್ಯ ವಲಯ ಉಪ- ಪೊಲೀಸ್ ಮಹಾನಿರೀಕ್ಷಕರಾದ ಅಜಯ್ ಹಿಲೋರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ ಶಂಕರ್ ಸೇರಿದಂತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X