ಯಾದಗಿರಿ | ಕೆಕೆಆರ್‌ಡಿಬಿಯಿಂದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ : ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್

ಯಾದಗಿರಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈ ಭಾಗದ ಸುಮಾರು 42 ಶಾಸಕರು ಹೆಚ್ಚಿನ ಅಭಿವೃದ್ಧಿ ಕೆಲಸಗಳು ಮಾಡಲು ಸಾಧ್ಯವಾಗುತ್ತಿದೆ, ಇದಕ್ಕೆ ರಾಜ್ಯ ಸರ್ಕಾರ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಲೇಬೇಕು ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಹೇಳಿದರು.
ನಗರದ ನ್ಯೂ ಕನ್ನಡ ಶಾಲೆಯ ಹತ್ತಿರ ಹಾಗೂ ಅಂಬೇಡ್ಕರ್ ಚೌಕ ಹತ್ತಿರ ಕೆಕೆಆರ್ ಡಿಬಿಯ 2023-24ನೇ ಸಾಲಿನ ಯೋಜನೆಯಡಿ ಅಂದಾಜು ಮೊತ್ತ (ತಲಾ ಒಂದಕ್ಕೆ) 15 ಲಕ್ಷ ರೂ.ಗಳಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ವಿಜಯಲಕ್ಷ್ಮೀ ಕೃಷ್ಟ ನಾನೇಕ, ಮಹೇಶ ಕುರಕುಂಬಳ, ಗೋಪಾಲ ಗಿರಿಯಪ್ಪನೋರ್, ಶಿವಕುಮಾರ ಕರದಳ್ಳಿ, ಕಾರ್ಯಪಾಲಕ ಅಭಿಯಂತರರಾದ ಧನಂಜಯ್ಯ ಆರ್., ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವರಾಜ ಹುಡೇದ್, ಸೂಗುರೆಡ್ಡಿ ಸೇರಿದಂತೆ ಇತರರಿದ್ದರು.
Next Story





