ಯಾದಗಿರಿ | ಛದ್ಮವೇಷ ಸ್ಪರ್ಧೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಯಾದಗಿರಿ : ಹುಣಸಗಿಯಲ್ಲಿ ಜರುಗಿದ ಸುರಪುರ/ಹುಣಸಗಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಛದ್ಮವೇಷ ವಿಭಾಗದ ಸ್ಪರ್ಧೆಯಲ್ಲಿ ನಗರದ ಖುರೇಷಿ ಮೊಹಲ್ಲಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ ಸಿದ್ಧರೂಢ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಅಗಿದ್ದಾರೆ.
ಕಾಂತಾರ ಛದ್ಮವೇಷಧಾರಿ ಮಲ್ಲಿಕಾರ್ಜುನ ಸಿದ್ಧಾರೂಢ ಅವರು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ವಿದ್ಯಾರ್ಥಿಯ ಪ್ರಥಮ ಸ್ಥಾನ ಗಳಿಸಿದ್ದಕ್ಕಾಗಿ ನಗರಸಭೆ ಅಧ್ಯಕ್ಷೆ ಹೀನಾ ಕೌಸರ್ ಶಕೀಲ್ ಅಹ್ಮದ, ಶಾಲೆಯ ಸ್ಯಾಮುವೇಲ್, ಎಸ್ಡಿಎಂಸಿ ಅಧ್ಯಕ್ಷ ನಾಗಪ್ಪ ರಾಯಚೂರಕರ ಹಾಗೂ ಶಿಕ್ಷಕ ಸಿಬ್ಬಂದಿ ಓಣಿಯ ಮುಖಂಡರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Next Story