Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಳಿಚಕ್ರ ಗ್ರಾಮದಲ್ಲಿ...

ಯಾದಗಿರಿ | ಬಳಿಚಕ್ರ ಗ್ರಾಮದಲ್ಲಿ ನಾಡಕಚೇರಿ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ24 Feb 2025 6:25 PM IST
share
Photo of Program

ಯಾದಗಿರಿ : ಜನರು ನಾಡಕಚೇರಿಗೆ ತಮ್ಮ ಕಷ್ಟಗಳನ್ನು ಹೇಳಿಕೊಂಡು ಸಮಸ್ಯೆಗಳನ್ನು ತೆಗೆದುಕೊಂಡು ಬಂದಾಗ ಅವರಿಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಬಳಿಚಕ್ರ ಗ್ರಾಮದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಡಕಚೇರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮಾನವೀಯತೆ ಆಧಾರದ ಮೇಲೆ ಕಚೇರಿಗೆ ಬಂದಂತವರಿಗೆ ಕೆಲಸ ಮಾಡಿಕೊಡಬೇಕು, ಇಲ್ಲಿಗೆ ಬರುವವರು ಬಡವರು, ರೈತರು ಇರುತ್ತಾರೆ ಅವರಿಗೆ ಕಷ್ಟಕಾಲದಲ್ಲಿ ಕೈ ಹಿಡಿದು ಅವರ ಕೆಲಸ ಮಾಡಿಕೊಟ್ಟಾಗ ನಿಮಗೆ ಪುಣ್ಯಸಿಗುತ್ತದೆ, ಅವರು ನಿಮ್ಮಿಂದ ಬೇರೆನು ನಿರೀಕ್ಷೆ ಮಾಡಲ್ಲ ಎಂದು ಹೇಳಿದರು.

ಕಂದಾಯ ಇಲಾಖೆಯು ಜನಸಾಮಾನ್ಯರ, ರೈತ ಸ್ನೇಹಿ ಇಲಾಖೆಯಾಗಿದೆ. ಈ ಇಲಾಖೆ ಸೇವೆಗಳ ಸುಧಾರಣೆಗೆ ಸರಕಾರ ಆಧ್ಯತೆ ನೀಡಿದೆ. ಬಳಿಚಕ್ರ ನಾಡಕಚೇರಿಗೆ ಅತ್ಯುತ್ತಮವಾದ ನೂತನ ಕಟ್ಟಡ ನಿರ್ಮಾಣ ಮಾಡಿ ಜನಸೇವೆಗೆ ಸಮರ್ಪಿಸಲಾಗಿದೆ, ಅರ್ಜಿ ಹಿಡಿದು ಬರುವ ನಾಗರಿಕರು ಬಿಸಿಲಲ್ಲಿ ನಿಲ್ಲಬಾರದು ಎನ್ನುವ ಕಾರಣಕ್ಕೆ ತಂಪಾದ ನೆರಳು ಸಿಗಲಿ ಎನ್ನುವ ಸದುದ್ದೇಶದಿಂದ ಸರತಿ ನಿಲ್ಲುವ ಜಾಗಕ್ಕೆ ಕೋಣೆ ನಿರ್ಮಾಣ ಮಾಡಲಾಗಿರುವುದು ಒಳ್ಳೆಯ ಸಂಗತಿಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಶರಣಬಸ್ಸಪ್ಪ ಕೋಟೆಪ್ಪಗೋಳ್ ಮಾತನಾಡಿ, ಕಂದಾಯ ಇಲಾಖೆ ಎಲ್ಲರಿಗೂ ಸೇವೆ ನೀಡುತ್ತದೆ. ಕೆಲಸದ ಒತ್ತಡವಿದ್ದರೂ ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಿ, ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಜಿಲ್ಲೆಯ ಎಲ್ಲರಿಗೂ ಜನಸ್ನೇಹಿ ಆಡಳಿತ ನೀಡಲು ಎಲ್ಲರೂ ಬದ್ಧವಾಗಿದ್ದು, ಸಾರ್ವಜನಿಕರು ಸಹಕಾರವೂ ಮುಖ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ, ಕಂದಾಯ ನಿರೀಕ್ಷಕರಿಗೆ, ಉಪ ತಹಶಿಲ್ದಾರರಿಗೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಸಹಕಾರ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಳಿಚಕ್ರ ಗ್ರಾಮಸ್ಥರು ಶಾಸಕ ಶರಣಗೌಡ ಕಂದಕೂರ ರವರಿಗೆ ಸನ್ಮಾನಿಸಿ, ಅಹವಾಲುಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ಗ್ರಾಪಂ ಅಧ್ಯಕ್ಷರು, ತಹಶೀಲ್ದಾರ್, ಕಂದಾಯ ಇಲಾಖೆ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಅಧಿಕಾರಿಗಳು ಇದ್ದರು.

ಕಂದಾಯ ಅಧಿಕಾರಿಗಳು ಕಚೇರಿಯಲ್ಲಿರಿ :

ನಾಡಕಚೇರಿಯಲ್ಲಿ ಕಂದಾಯ ಅಧಿಕಾರಿಗಳು ಯಾವಾಗಲೂ ಸದಾ ಇರಬೇಕು, ಕಚೇರಿಯಲ್ಲಿದ್ದು, ಬಂದಂತಹ ನಾಗರೀಕರಿಗೆ ಸೌಮ್ಯರೀತಿಯಿಂದ ವರ್ತಿಸಿ ಕೆಲಸ ಮಾಡಿಕೊಡಬೇಕು, ಯಾರೂ ಮೇಲಾಧಿಕಾರಿಗಳಿಗೆಯಾಗಲಿ, ನಮಗಾಗಲಿ ದೂರು ನೀಡುವಂತಹ ವಾತಾವರಣ ಉಂಟಾಗಬಾರದು.

ನಾನು ಭಾಷಣ ಮಾಡಲು ಬಂದಿಲ್ಲ, ನಿಮ್ಮೂರಿಗೆ ಬರುವಷ್ಟರಲ್ಲಿ ಕಾಮಗಾರಿಗೆ ಅನುದಾನ ತೆಗೆದುಕೊಂಡು ಬಂದಿದ್ದೇನೆ, ಬಳಿಚಕ್ರ ಗ್ರಾಮಸ್ಥರು ಬಹಳ ದಿನಗಳಿಂದ ಕೇಳುತ್ತಿರುವ ಮೂರು ಮಾರ್ಗರಸ್ತೆಗಳನ್ನು ಅಭಿವೃದ್ಧಿ ಪಡಿಸಲು, ಸುಮಾರು 70 ಲಕ್ಷ ರೂ. ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದೇನೆ, ನೀವು ಸಹಕಾರ ನೀಡಿ ರಸ್ತೆ ಅಭಿವೃದ್ದಿಗೆ ಸ್ಪಂದಿಸಬೇಕು, ಅದರ ಜೊತೆಗೆ ಕುಡಿಯುವ ನೀರಿಗಾಗಿ ಎಷ್ಟು ಹಣಬೇಕಾದರೂ ಶಾಸಕರ ಅನುದಾನದಲ್ಲಿ ನೀಡುತ್ತೇನೆ, ಗ್ರಾಮ ಪಂಚಾಯತಿಯವರು ಕೂಡಲೇ ಕೆಲಸ ಆರಂಭಿಸಬೇಕು, ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು, ಕುಡಿಯುವ ನೀರಿನ ವಿಷಯದಲ್ಲಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

- ಶರಣಗೌಡ ಕಂದಕೂರ ಶಾಸಕರು, ಗುರುಮಠಕಲ್


share
ವಾರ್ತಾಭಾರತಿ
ವಾರ್ತಾಭಾರತಿ
Next Story
X