ಯಾದಗಿರಿ | ಎಸ್‌ಸಿಎಸ್‌ಪಿ, ಟಿಎಸ್‌ಪಿ ವಿಶೇಷ ಯೋಜನೆಯ ಹಣವನ್ನು ಬೇರೆ ಯೋಜನೆಗಳಿಗೆ ಬಳಸದಂತೆ ಎನ್.ಮಹೇಶ್ ಆಗ್ರಹ

ಯಾದಗಿರಿ : ರಾಜ್ಯದ ಕಾಂಗ್ರೆಸ್ ಸರಕಾರ SC.ST ಸಮುದಾಯಕ್ಕೆ ಮೀಸಲಿಟ್ಟ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನು ಬೇರೆಬೇರೆ ಯೋಜನೆಗಳಿಗೆ ಬಳಸದಂತೆ ಆಗ್ರಹಿಸಿ ಸೋಮವಾರ ಮಾಜಿ ಸಚಿವ ಎನ್.ಮಹೇಶ್ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾಧಿಕಾರಿಗಳಿ ಮನವಿ ಪತ್ರ ಸಲ್ಲಿಸಿದರು.
ಬಿಜೆಪಿ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಅವರು, 2023ರ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹೇಗಾದರು ಮಾಡಿ ಅಧಿಕಾರ ಹಿಡಿಯಲು ಐದು ಗ್ಯಾರೆಂಟಿಗಳನ್ನು ಘೋಷಿಸಿತು.ಅದನ್ನು ಮತದಾರರಿಗೆ ನಂಬಿಸಲು ಹರಸಾಹಸ ನಡೆಸಿತು, ಆಗ ಕಾಂಗ್ರೆಸ್ ಪಕ್ಷದ ಯಾವ ನಾಯಕರೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ಎಸ್.ಸಿ.ಪಿ, ಟಿಎಸ್.ಪಿ ಹಣ ಬಳಸುವುದಾಗಿ ಹೇಳಿರಲಿಲ್ಲ. ಆದರೆ ಮತದಾರರನ್ನು ಯಾಮಾರಿಸಿ ಚುನಾವಣೆ ಗೆದ್ದ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದ ತರುವಾಯ ಮಾಡಿದ್ದೇನು? 2023ರಲ್ಲಿ ಎಸ್.ಸಿ.ಪಿ ಯಿಂದ 7718.15 ಸಾವಿರ ಕೋಟಿ ರೂ. ಮತ್ತು ಟಿ.ಎಸ್.ಪಿ ಯಿಂದ 3430.85 ಸಾವಿರ ಕೋಟಿ ರೂ. ಒಟ್ಟಾರೆ 11144.00 ಸಾವಿರ ಕೋಟಿ ರೂ. ಗಳನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ದುರ್ಬಳಕೆ ಮಾಡಿಕೊಂಡಿತು ಎಂದರು.
ರಾಜ್ಯದ ಎಲ್ಲಾ ನಿಗಮಗಳು ಸರ್ಕಾರದ ಹಣಕಾಸಿನ ನೆರವಿಲ್ಲದೆ ಸೋರಗಿವೆ. ಯಾವ ನಿಗಮದಲ್ಲಿಯೂ ಯಾವ ಯೋಜನೆಯೂ ಜಾರಿಯಾಗುತ್ತಿಲ್ಲ. ಸಾರಿಗೆ ಸಂಬಳಕ್ಕೂ ಕಾಸಿಲ್ಲದೆ ದಿವಾಳಿಸ್ಥಿ ತಿಯಿದೆ ಎಂದು ಹೇಳಿದರು.
ಜಿಲ್ಲಾ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, ಸರ್ಕಾರ ಈಗಾಗಲೇ ತನ್ನ ಐದು ಗ್ಯಾರೆಂಟಿಗಳಿಗೆ ಸಂಬಂಧಿಸಿದಂತೆ ದಲಿತರ ಮೀಸಲು ನಿಧಿಗೆ ಕನ್ನ ಹಾಕಲು ಪ್ರಸ್ತಾವನೆ ಸಿದ್ದಪಡಿಸಿದೆ, ಕಾಂಗ್ರೆಸ್ ಸರ್ಕಾರದ ಈ ಬೇಜವಾಬ್ದಾರಿ, ದಲಿತ ವಿರೋಧಿ ನೀತಿಯನ್ನು ನಾವು ಒಪ್ಪುವುದಿಲ್ಲ. ಸದನದ ಹೊರಗೆ ಮತ್ತು ಒಳಗೆ ನಾವು ಗಂಭೀರ ಹೋರಾಟ ಮಾಡುತ್ತೇವೆ ಅದಕ್ಕಾಗಿ ಇಂದು ನಮ್ಮ ಜಿಲ್ಲೆಯಲ್ಲಿ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕ.ಲಲಿತಾ ಅನಪುರ ಮಾತನಾಡಿ, ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮೀಸಲಾಗಿರುವ ಹಣವನ್ನು ಸರಿಯಾದ ರೀತಿಯಲ್ಲಿ ಬಳಸಿದಾಗ ಮಾತ್ರ ಅವರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುನ್ನಡೆಯಲು ಸಾಧ್ಯ. ಈ ಸಮುದಾಯಗಳ ಅಭಿವೃದ್ಧಿಗೆ ಕೈಜೋಡಿಸಿದಾಗ ಸಮತೋಲನವಾದ ಮತ್ತು ನ್ಯಾಯಸಮ್ಮತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ದೇವರಾಜ ನಾಯಕ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡೆ ನಾಗರತ್ನ ಕುಪ್ಪಿ, ಖಂಡಪ್ಪ ದಾಸನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಮೇಲಪ್ಪ ಗುಳಗಿ ಮತ್ತು ಪರುಶುರಾಮ ಕುರಕುಂದಿ,ಜಿಲ್ಲಾ ವಕ್ತಾರ ಹಣಮಂತ ಇಟಗಿ,ಸಿದ್ದಣ್ಣಗೌಡ ಕಾಡಂನೊರ, ಶರಣುಗೌಡ ಐಕೂರ,ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ಅಡಿವೆಪ್ಪ ಜಾಕ, ಜಿಲ್ಲಾ ಕಾರ್ಯದರ್ಶಿ ಪರ್ವತರಡ್ಡಿ ಬೆಂಡಗುಂಬಳಿ ಮತ್ತು ಮಲ್ಲಿಕಾರ್ಜುನ ಹೊನಿಗೇರಿ,ಎಸ್,ಟೀ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ಕಾವಲಿ ರಾಮಸಮುದ್ರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್,ಸಿದ್ದಲಿಂಗಪ್ಪ ನಾಯಕ,ನಗರಸಭೆ ಉಪಾಧ್ಯಕ್ಷೆ ರುಕೀಯ ಬೇಗಂ, ಗುರುಮಠಕಲ್ ಮಂಡಲ ಅಧ್ಯಕ್ಷ ನರಸಿಂಹಲು ನೀರೆಟ್ಟಿ, ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ,ಸಂಗಣ್ಣ ವೈಲಿ, ಜಿಲ್ಲಾ ಪದಾಧಿಕಾರಿಗಳ ಆರು ಮಂಡಲ ಪದಾಧಿಕಾರಿಗಳ ಸೇರಿದಂತೆ ಅನೇಕರು ಕಾರ್ಯಕರ್ತರು ಉಪಸ್ಥಿತರಿದ್ದರು.







