Yadagiri | ಬರಪೀಡಿತ ರೈತರಿಂದ ಒತ್ತಾಯಪೂರ್ವಕ ಸಾಲ ವಸೂಲಿ ಬೇಡ: ಬ್ಯಾಂಕ್‌ಗಳಿಗೆ ಡಿಸಿ ಸೂಚನೆ

ಯಾದಗಿರಿ: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸರ್ಕಾರ ಬರಪೀಡಿತ ತಾಲೂಕುಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಂದ ಯಾವುದೇ ಕಾರಣಕ್ಕೂ ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆ ಕೊರತೆಯಿಂದ ಬಿತ್ತಿದ ಬೆಳೆಗಳು ವ್ಯಾಪಕವಾಗಿ ಹಾನಿಗೊಳಗಾಗಿದ್ದು, ಜಿಲ್ಲೆಯ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕುಗಳು ರೈತರ ಮೇಲೆ ಸಾಲ ಮರುಪಾವತಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.
ರೈತರ ಹಿತದೃಷ್ಟಿಯಿಂದ ಈಗಿರುವ ಕೃಷಿ ಸಾಲಗಳನ್ನು ಮರುಹೊಂದಾಣಿಕೆ (Restructuring) ಮಾಡುವ ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಹೆಚ್ಚುವರಿ ಸಾಲ (Incremental Loan) ಸೌಲಭ್ಯವನ್ನು ಒದಗಿಸಿ ರೈತರಿಗೆ ನೆರವಾಗುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬರ ಪರಿಸ್ಥಿತಿಯಲ್ಲಿ ರೈತರಿಗೆ ಅಗತ್ಯ ನೆರವು ಒದಗಿಸಲು ಬ್ಯಾಂಕುಗಳು ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.




