ಯಾದಗಿರಿ | ಮಕ್ಕಳ ಹಕ್ಕುಗಳ ರಕ್ಷಣೆ, ಕಾನೂನುಗಳ ಕುರಿತು ಅಧಿಕಾರಿಗಳಿಗೆ ಒಂದು ದಿನದ ತರಬೇತಿ : ಜಿಲ್ಲಾಧಿಕಾರಿ

ಯಾದಗಿರಿ : ಡಿ.24 ರಂದು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾನೂನುಗಳ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ತರಬೇತಿಗೆ ಹಾಜರಾಗುವಂತೆ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ತಿಳಿಸಿದ್ದಾರೆ.
ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಬೆಂಗಳೂರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು ಶಶಿಧರ ಕೋಸಂಬೆ ಅವರು ಯಾದಗಿರಿ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಬಾಲ್ಯ ವಿವಾಹ, ಪೊಕ್ಸೋ, ಆರ್.ಟಿ.ಇ ಕಾಯ್ದೆ ಹಾಗೂ ಮಕ್ಕಳ ರಕ್ಷಣೆ ಕುರಿತು ತರಬೇತಿಯನ್ನು ಡಿ.24ರ ಮಂಗಳವಾರ ರಂದು ಬೆಳಿಗ್ಗೆ 10 ಗಂಟೆಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತರಬೇತಿಗೆ ಕಡ್ಡಾಯವಾಗಿ ಹಾಜರಾಗುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







