Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಪಂಚಾಯತ್ ಅನುದಾನ ದುರ್ಬಳಕೆ...

ಯಾದಗಿರಿ | ಪಂಚಾಯತ್ ಅನುದಾನ ದುರ್ಬಳಕೆ ಆರೋಪ: ಸುರಪುರ ತಾಲ್ಲೂಕಿನ ಗ್ರಾಮ ಪಂಚಾಯತ್‌ಗಳ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ2 April 2026 8:04 PM IST
share
ಯಾದಗಿರಿ | ಪಂಚಾಯತ್ ಅನುದಾನ ದುರ್ಬಳಕೆ ಆರೋಪ: ಸುರಪುರ ತಾಲ್ಲೂಕಿನ ಗ್ರಾಮ ಪಂಚಾಯತ್‌ಗಳ ವಿರುದ್ಧ ದೂರು

ಯಾದಗಿರಿ : ಸುರಪುರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಪರಿಶಿಷ್ಟ ಜಾತಿಗೆ ಮೀಸಲಾದ ಅನುದಾನ ದುರ್ಬಳಕೆಗೊಂಡಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ.

ಈ ಕುರಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸುರಪುರ ಘಟಕದ ಪದಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ವಿವಿಧ ಕಾಮಗಾರಿಗಳ ಹೆಸರಿನಲ್ಲಿ ಮೀಸಲಾದ ಅನುದಾನವನ್ನು ನಿಯಮಬಾಹಿರವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಘದ ಪ್ರತಿನಿಧಿಗಳ ಪ್ರಕಾರ, ಸುರಪುರ ತಾಲ್ಲೂಕಿನ ಹಲವಾರು ಗ್ರಾಮ ಪಂಚಾಯತಗಳಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅನುದಾನವನ್ನು ಸರಿಯಾದ ಉದ್ದೇಶಗಳಿಗೆ ಬಳಸದೇ, ಕಾಗದದಲ್ಲೇ ಕಾಮಗಾರಿಗಳನ್ನು ತೋರಿಸಿ ದುರ್ಬಳಕೆ ಮಾಡಲಾಗಿದೆ. ಹೆಗ್ಗನದೊಡ್ಡಿ, ಬಾದ್ಯಾಪುರ, ಏವೂರು, ಯಾಳಗಿ, ಯಕ್ತಾಪುರ, ವಾಗಣಗೇರಾ, ತಿಂಥಣಿ, ಸೂಗೂರು, ಪೇಠ ಅಮ್ಮಾಪುರ, ಕಿರದಳ್ಳಿ, ನಗನೂರ, ಮಲ್ಲಾಬಿ, ಮಾಲಗತ್ತಿ, ಖಾನಾಪುರ (ಎಸ್.ಹೆಚ್.), ಕರಡಕಲ್ಲ, ಕಚಕನೂರ, ದೇವಿಕೇರಾ, ದೇವತ್ಕಲ್, ದೇವರಗೋನಾಲ, ದೇವಾಪುರ, ಅರಕೇರಾ (ಕೆ), ಆಲ್ದಾಳ ಸೇರಿದಂತೆ ಹಲವು ಪಂಚಾಯತಗಳಲ್ಲಿ ಈ ಅಕ್ರಮ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ವಿಶೇಷವಾಗಿ ಸೂಗೂರು (10,70,190 ರೂ.), ಪೇಠ ಅಮ್ಮಾಪುರ (2,93,000 ರೂ.), ಕಿರದಳ್ಳಿ (4,45,000 ರೂ.), ನಗನೂರ (1,60,000 ರೂ.), ಮಲ್ಲಾಬಿ, ಮಾಲಗತ್ತಿ (3,50,000 ರೂ.), ಖಾನಾಪುರ (ಎಸ್.ಹೆಚ್.) (4,10,000 ರೂ.), ಕರಡಕಲ್ಲ (2,00,000 ರೂ.), ಕಚಕನೂರ (1,23,500 ರೂ.), ದೇವಿಕೇರಾ (5,60,000 ರೂ.), ದೇವತ್ಕಲ್ (6,62,500 ರೂ.), ದೇವರಗೋನಾಲ (2,50,000 ರೂ.), ದೇವಾಪುರ (1,45,493 ರೂ.), ಅರಕೇರಾ (ಕೆ) (6,61,857 ರೂ.) ಹಾಗೂ ಆಲ್ದಾಳ (5,80,000 ರೂ.) ಗ್ರಾಮ ಪಂಚಾಯತಗಳಲ್ಲಿ ಲಕ್ಷಾಂತರ ರೂಪಾಯಿ ಅನುದಾನ ದುರ್ಬಳಕೆಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಒಟ್ಟು 86,26,345 ರೂ. ಅನುದಾನವನ್ನು ಯಾವುದೇ ಕಾಮಗಾರಿಗಳಿಗೆ ಬಳಸದೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೋಗಸ್ ಬಿಲ್‌ಗಳ ಮೂಲಕ ಲೂಟಿ ಮಾಡಲಾಗಿದೆ ಎಂದು ಸಂಘ ಗಂಭೀರವಾಗಿ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಪ್ರತ್ಯೇಕ ತನಿಖಾ ತಂಡವನ್ನು ರಚಿಸಿ, ತಪ್ಪಿತಸ್ಥ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘ ಒತ್ತಾಯಿಸಿದೆ. ಜೊತೆಗೆ ದುರ್ಬಳಕೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ವಸೂಲಿ ಮಾಡಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಬೇಕೆಂದು ಆಗ್ರಹಿಸಲಾಗಿದೆ.

ಮನವಿಗೆ ತಕ್ಷಣ ಸ್ಪಂದನೆ ಸಿಗದಿದ್ದರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಹಂತ ಹಂತವಾಗಿ ಹೋರಾಟ ಕೈಗೊಳ್ಳುವುದಾಗಿ ಜೈಭೀಮ ಮಲ್ಲಪ್ಪ ಹಾಗೂ ದೇವರಾಜ ಎಚ್ಚರಿಕೆ ನೀಡಿದ್ದಾರೆ.

Tags

yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X