Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಆಯುರ್ವೇದ ಚಿಕಿತ್ಸೆಗೆ...

Yadagiri | ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಿ: ಶ್ರೀನಿವಾಸರಡ್ಡಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ30 Sept 2026 7:49 PM IST
share
Yadagiri | ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಿ: ಶ್ರೀನಿವಾಸರಡ್ಡಿ ಪಾಟೀಲ್

ಯಾದಗಿರಿ: ದೇಶದ ವೈದ್ಯಕೀಯ ಪದ್ಧತಿಗಳಲ್ಲಿ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಹತ್ವವಿದೆ. ಪ್ರಸಕ್ತ ದಿನಗಳಲ್ಲಿ ಜನರು ಆಯುರ್ವೇದ ಚಿಕಿತ್ಸೆಯತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಸರ್ಕಾರ ಜಿಲ್ಲೆಯಲ್ಲಿ ಇನ್ನಷ್ಟು ಆಯುರ್ವೇದ ಆಸ್ಪತ್ರೆಗಳನ್ನು ಆರಂಭಿಸಿ, ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ಅವುಗಳನ್ನು ಕ್ರಿಯಾಶೀಲಗೊಳಿಸಬೇಕು. ಇದರಿಂದ ಜನರಿಗೆ ಸಕಾಲದಲ್ಲಿ ಆಯುರ್ವೇದ ಚಿಕಿತ್ಸೆ ದೊರೆಯುವಂತಾಗಿ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರೇರಣೆ ಸಿಗುತ್ತದೆ ಎಂದು ವಡಗೇರಾ ಜಿ.ಪಂ. ಮಾಜಿ ಸದಸ್ಯ ಶ್ರೀನಿವಾಸರಡ್ಡಿ ಪಾಟೀಲ್ ಚೆನ್ನೂರ ಹೇಳಿದರು.

ಬುಧವಾರ ನಗರದ ಆಯುರ್ವೇದ ಜಿಲ್ಲಾಸ್ಪತ್ರೆಯಲ್ಲಿ ಏಷಿಯನ್ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ವತಿಯಿಂದ ಆರೋಗ್ಯ ಕ್ಷೇತ್ರದಲ್ಲಿ ನೀಡಲಾಗುವ ‘ಆಯುರ್ಭೂಷಣ’ ಪ್ರಶಸ್ತಿಗೆ ಭಾಜನರಾದ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯ ಡಾ. ಪ್ರಮೋದ ಕುಲಕರ್ಣಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಡಾ. ಪ್ರಮೋದ ಕುಲಕರ್ಣಿ ಅವರು ಗಡಿಭಾಗದ ಮಾದ್ವಾರ ಆಯುರ್ವೇದ ಆಸ್ಪತ್ರೆಯಲ್ಲಿ 30 ವರ್ಷಗಳ ಕಾಲ ಪ್ರಾಮಾಣಿಕವಾಗಿ ಹಾಗೂ ಜನಸ್ನೇಹಿಯಾಗಿ ಸೇವೆ ಸಲ್ಲಿಸಿದ್ದಾರೆ. ಆಯುರ್ವೇದ ಚಿಕಿತ್ಸೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಅದರ ಪ್ರಯೋಜನಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು.

ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಶರಣಪ್ಪಗೌಡ ಕೌಳೂರ ಮಾತನಾಡಿ, ಜಿಲ್ಲೆಯಲ್ಲಿ ಕೇವಲ ಎರಡು ಆಯುರ್ವೇದ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಮೂರು ಚಿಕಿತ್ಸಾಲಯಗಳಿವೆ. ಸರ್ಕಾರ ಜಿಲ್ಲೆಯಲ್ಲಿ ಪಂಚಕರ್ಮ ಚಿಕಿತ್ಸೆಯನ್ನು ರೋಗಿಗಳಿಗೆ ದೊರೆಯುವಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಇದರಿಂದ ರೋಗಿಗಳು ಚಿಕಿತ್ಸೆಗಾಗಿ ದೂರದ ಧರ್ಮಸ್ಥಳ, ಹಾಸನ, ಮಂಗಳೂರು, ಉಡುಪಿ, ಬೆಂಗಳೂರು, ಸಾಂಗ್ಲಿ ಹಾಗೂ ಮೀರಜ್‌ನ ಆಸ್ಪತ್ರೆಗಳಿಗೆ ಅಲೆದಾಡುವುದು ತಪ್ಪಲಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಪ್ರಮೋದ ಕುಲಕರ್ಣಿ, ತಮ್ಮ ಇಲಾಖೆಯಿಂದ ಈಗಾಗಲೇ ನಗರದಲ್ಲಿ 50 ಹಾಸಿಗೆಗಳ ಆಯುರ್ವೇದ ಜಿಲ್ಲಾಸ್ಪತ್ರೆ ಸ್ಥಾಪಿಸಲು ಯೋಜನಾ ಪ್ರಸ್ತಾವನೆಯನ್ನು ಹಿರಿಯ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆಸ್ಪತ್ರೆ ಆರಂಭಗೊಂಡರೆ ಕಲ್ಯಾಣ ಕರ್ನಾಟಕ ಭಾಗದ ರೋಗಿಗಳಿಗೆ ಆಯುರ್ವೇದದ ವಿವಿಧ ಚಿಕಿತ್ಸಾ ಸೌಲಭ್ಯಗಳನ್ನು ಒಂದೇ ಕಡೆ ಒದಗಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಹಿರಿಯ ಮುಖಂಡ ಹೊನ್ನಪ್ಪ ಮುಸ್ಟೂರ, ಸಂಗಮೇಶ ಕೆಂಭಾವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Ayurvedic treatmentyadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X