ಯಾದಗಿರಿ | ಸತತ ಅಧ್ಯಯನ, ನಿರಂತರ ಪರಿಶ್ರಮದಿಂದ ಪ್ರಗತಿ ಸಾಧ್ಯ : ಕುಂಟೋಜಿ

ಸುರಪುರ : ವಿದ್ಯಾರ್ಥಿಗಳು ಸತತ ಅಧ್ಯಯನ ನಿರಂತರ ಪರಿಶ್ರಮದಿಂದ ಮಾತ್ರ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ರುಕ್ಮಾಪೂರ ಮಹರ್ಷಿ ವಾಲ್ಮಿಕಿ ಪ್ರೌಢ ಶಾಲೆಯ ಮುಖ್ಯ ಗುರು ಮಹೇಶ ಕುಂಟೋಜಿ ಹೇಳಿದರು.
ರಂಗಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಇಂದು ನಡೆದ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೆಳನ ಹಾಗೂ ಪಿಯುಸಿ ದ್ವಿತಿಯ ವರ್ಷದ ಮತ್ತು ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಉತ್ತಮ ಗುರಿ ಉದ್ದೆಶ ಹೊಂದಿರುವುದರ ಜೊತೆಗೆ ಅತ್ಯಂತ ಪರಿಶ್ರಮದ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುರಪುರ ಅರುಂಧತಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಲ್.ಚಹ್ವಾಣ, ಹೈದರಾಬಾದ್ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗಿ ಶಾಲಾ, ಕಾಲೇಜುಗಳ ಕೊಡುಗೆ ಬಹಳ ಮಹತ್ತರವಾಗಿದೆ, ಆ ದಿಶೆಯಲ್ಲಿ ಈ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಡಾ.ಬಾಬಾ.ಜಗಜೀವನರಾವ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿಂಗಣ್ಣ ಬುಡ್ಡ, ಶಿವಶರಣಪ್ಪ ಹೆಡಿಗಿನಾಳ, ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ, ಉಪ ಪ್ರಾಚಾರ್ಯ ಬಲಭೀಮ ಪಾಟಿಲ್ ವೇದಿಕೆ ಮೇಲಿದ್ದರು. ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಅಂಗಡಿ ಕನ್ನೆಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದಲ್ಲಿ ಅಭ್ಯಾಸಮಾಡಿ ಸರಕಾರಿ ಮತ್ತು ಅರೆಸರಕಾರಿ ವೃತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಭಿನಂಧಿಸಲಾಯಿತು.
ಇದೇ ಸಂದರ್ಭದಲ್ಲಿ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಕೂಡ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಸಮಾರಂಭ ಜರಗಿದವು. ಕಾರ್ಯಕ್ರಮವನ್ನು ಶೃತಿ ಹಿರೇಮಠ ನಿರೂಪಿಸಿದರು, ಮಾನಯ್ಯ ರುಕ್ಮಾಪೂರ ಸ್ವಾಗತಿಸಿದರು, ಶ್ರೀಕಾಂತ ರತ್ತಾಳ ವಂದಿಸಿದರು.







