Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಗಡಿ ಪ್ರದೇಶಾಭಿವೃದ್ಧಿ...

ಯಾದಗಿರಿ | ಗಡಿ ಪ್ರದೇಶಾಭಿವೃದ್ಧಿ ಅಧ್ಯಕ್ಷರಿಂದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ11 Feb 2025 4:24 PM IST
share
Photo of Metting

ಯಾದಗಿರಿ : ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿ ಯಾದಗಿರಿ ಜಿಲ್ಲೆಗೆ ಬಿಡುಗಡೆ ಮಾಡಲಾದ ಅನುದಾನದಡಿ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಗ್ಗೆ ಹಣ ಬಳಕೆ ಪ್ರಮಾಣ ಪತ್ರದ ಜೊತೆಗೆ ಕಾಮಗಾರಿಗಳ ಪ್ರಗತಿ ವರದಿ ಸಲ್ಲಿಸಬೇಕೆಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ವಿವಿಧ ಅನುಷ್ಠಾನ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 2010-11ರಿಂದ ವಿವಿಧ ಕೆಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದರು, ಹಣ ಬಳಕೆ ಪ್ರಮಾಣ ಪತ್ರ ಬಂದಿಲ್ಲ. ಅನುದಾನ ನೀಡಿದರೂ ಕಾಮಗಾರಿ ಪೂರ್ಣಗೊಂಡ ಬಗ್ಗೆ ಮಾಹಿತಿ ಬಂದಿಲ್ಲ. ಬಾಕಿ ಉಳಿದ ಕಾಮಗಾರಿಗೆ ಅನುದಾನ ಅವಶ್ಯಕತೆ ಇದಿಯೇ ಎಂಬ ಬಗ್ಗೆ ತಿಳಿಸಬೇಕು. ಇಲ್ಲದಿದ್ದಲ್ಲಿ ಅಗತ್ಯವಿರುವ ಕಡೆ ಈ ಅನುದಾನ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ ಹಾಗೂ ಹೊರ ರಾಜ್ಯದ ಕನ್ನಡ ಪರ ಸಂಘ-ಸಂಸ್ಥೆಗಳಿಗೆ ಕನ್ನಡ ಭಾಷಾ ಚಟುವಟಿಕೆಗಳಿಗಾಗಿ ಪ್ರೋತ್ಸಾಹ ನೀಡುವುದು ಹಾಗೂ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಗ್ರಂಥಾಲಯ, ಕ್ರೀಡಾ ಕೊಠಡಿ, ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ, ಆಟದ ಮೈದಾನ ಇತ್ಯಾದಿ ಸೌಲಭ್ಯಗಳನ್ನು ಪ್ರಾಧಿಕಾರದಿಂದ ಒದಗಿಸಿದಲ್ಲಿ ಸೂಕ್ತ. ಇದರಿಂದ ಕನ್ನಡಿಗರಿಗೆ ಹಾಗೂ ಗಡಿ ಭಾಗದ ಮಕ್ಕಳಿಗಾದರೂ ಅನುಕೂಲವಾಗಬಹುದು. ಈ ಹಿನ್ನೆಲೆಯಲ್ಲಿ ಈವರೆಗೆ ಮೂಲಸೌಕರ್ಯಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿದಲ್ಲಿ, ಇತರೆಡೆ ಅನುದಾನ ಹಂಚಿಕೆಗೂ ಸೂಕ್ತ ಅವಕಾಶ ಕಲ್ಪಿಸಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

2010-11ರಿಂದ ಇದೂವರೆಗೆ ಪ್ರಾಧಿಕಾರದಿಂದ ಹಣ ಬಿಡುಗಡೆ, ವರ್ಷವಾರು ಕಾಮಗಾರಿ ಕೈಗೊಂಡಿರುವ ಬಗ್ಗೆ ಹಣ ಬಳಕೆ ಪ್ರಮಾಣ ಪತ್ರ, ಉಳಿದ ಮೊತ್ತ ಮಾಹಿತಿ ಆದಷ್ಟು ಬೇಗನೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಸೋಮಣ್ಣ ಬೇವಿನಮರದ ಸೂಚಿಸಿದರು.

ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಹಂತದ ಕಾಮಗಾರಿಗಳಾದ, ಶಾಲಾ ಕೊಠಡಿ, ಗ್ರಂಥಾಲಯ, ಪುಸ್ತಕ ವಿತರಣೆ, ಆಟದ ಮೈದಾನ ಸುಧಾರಣೆ, ಶಾಲಾ ಶೌಚಾಲಯಗಳ ಸ್ಥಳಕ್ಕೆ ಆಗಾಗ ಭೇಟಿ ನೀಡಿ ಪರಿಶೀಲಿಸಿದ ಮತ್ತು ಅನುದಾನ ಬಳಕೆ ಹಾಗೂ ಕಾಮಗಾರಿ ಪ್ರಗತಿ ಬಗ್ಗೆ ವರದಿ ಪಡೆಯಬೇಕು.

ಸಿ.ಸಿ ರಸ್ತೆ, ಇನ್ನಿತರ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಿಂದ ಪರಿಶೀಲನಾ ವರದಿ ಪಡೆಯಬೇಕು. ಸಾಂಸ್ಕೃತಿಕ ಭವನಗಳಿಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಿಂದ ಅವಶ್ಯಕ ಸಂದರ್ಭದಲ್ಲಿ ತಹಶೀಲ್ದಾರ್ ರ ಸಮನ್ವಯತೆಯಿಂದ ಪರಿಶೀಲಿಸಿದ, ಪರಿಶೀಲನಾ ವರದಿ ಪಡೆದು, ಸಮಗ್ರ ವರದಿಯನ್ನು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಸೋಮಣ್ಣ ಬೇವಿನಮರದ ಅವರು ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಆಯಾ ವರ್ಷದಲ್ಲಿ ಆಯೋಜಿಸಲು 50 ಸಾವಿರ ರೂ., ಒಂದು ಲಕ್ಷ ರೂ. ಮೊತ್ತ ಅನುದಾನ ಸಂಸ್ಥೆಗಳಿಗೆ ಹಂಚಿಕೆ ಮಾಡಿದ್ದರು, ಇದೂವರೆಗೆ ಸಂಸ್ಥೆಗಳಿಂದ ಅಂದಾಜು ಪಟ್ಟಿ ಬಾರದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಆಯಾ ವರ್ಷದಲ್ಲಿ ಆಗಬೇಕಾದ ಕಾರ್ಯಕ್ರಮಗಳು ಈಗ ಮಾಡುವಂತಿಲ್ಲ. ಹೀಗಾಗಿ ಇಂತಹ ಕಾರ್ಯಕ್ರಮಕ್ಕೆ ಹಾಗೂ ಬಾಕಿ ಉಳಿದ ರಸ್ತೆ ಕಾಮಗಾರಿಗೆ ಈಗ ಅನುದಾನ ಬಿಡುಗಡೆ ಮಾಡಬಾರದು ಎಂದು ನಿರ್ದೇಶನ ನೀಡಿದರು.

ನೆರೆಯ ಮಹಾರಾಷ್ಟ್ರ, ಕೇರಳ ಹಾಗೂ ರಾಜ್ಯದ ಗಡಿ ಭಾಗದಲ್ಲಿನ ಮಕ್ಕಳಿಗೆ, ಕನ್ನಡ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕಾಗಿದೆ. ಹಲವಾರು ವರ್ಷ ರಸ್ತೆ, ಸಾಂಸ್ಕೃತಿಕ ಭವನಗಳಿಗೆ ಹಣ ಬಳಸದೇ ಇರುವುದು ಸರಿಯಲ್ಲ. ಹಣ ಬಳಸಿ ಕಾಮಗಾರಿ ಕೈಗೊಂಡರೂ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸದೇ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಕಾರಣ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ವರದಿ ನೀಡುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಗಡಿ ಭಾಗದ ಬಾಕಿ ಕಾಮಗಾರಿ ಸ್ಥಳಕ್ಕೆ ಕೂಡಲೆ ತಹಶೀಲ್ದಾರರು, ಅನುಷ್ಠಾನ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ವರದಿ ನೀಡಬೇಕು. ಕೆಲಸವಾಗಿದ್ದರೆ ಹಣ ಬಳಕೆ ಪತ್ರ ಪಡೆಯಬೇಕು. ಇಲ್ಲದಿದ್ದರೆ ನೋಟಿಸ್ ನೀಡಿ ಹಣ ವಸೂಲಿ ಮಾಡಬೇಕು ಎಂದು ಸೂಚನೆ ನೀಡಿದ ಅವರು, ವಿವಿಧ ತಾಲೂಕಿನಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಪಿ.ಆರ್.ಇ.ಡಿ,ಕೆ ಆರ್ ಐಡಿ ಎಲ್ ಅಧಿಕಾರಿಗಳು ಮತ್ತು ತಹಶೀಲ್ದಾರರು ಸಮನ್ವಯತೆಯೊಂದಿಗೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X