ಯಾದಗಿರಿ | ಬೀಜ, ರಸಗೊಬ್ಬರ ಸಮರ್ಪಕವಾಗಿ ವಿತರಿಸುವಂತೆ ರೈತ ಸಂಘಟನೆಯಿಂದ ಪ್ರತಿಭಟನೆ

ಯಾದಗಿರಿ: ಜಿಲ್ಲೆಯಲ್ಲಿ ಬೀಜ ಮತ್ತು ರಸಗೊಬ್ಬರ ಅಭಾವ ಸೃಷ್ಟಿಯಾಗಿದೆ ಎಂದು ಆರೋಪಿಸಿ ರೈತ ಸಂಘಟನೆ ಮುಖಂಡರು, ರೈತರು ಸೋಮವಾರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಎಸ್‌ಕೆಎಂ ಸಂಯುಕ್ತ ಕಿಸಾನ ಮೋರ್ಚಾದ ಪದಾಧಿಕಾರಿಗಳು ನೂರಾರು ರೈತರೊಂದಿಗೆ ಡಿಸಿ ಕಚೇರಿ ಮುಂದೆ ಸಮರ್ಪಕ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಘಟನೆಗಳ ರಾಜ್ಯ ನಾಯಕರಾದ ಮಲ್ಲಿಕಾರ್ಜುನ ಸತ್ಯಂಪೇಟೆ, ಸಕಾಲಕ್ಕೆ ಅಗತ್ಯವಿರುವಷ್ಟು ಬೀಜ ಮತ್ತು ರಸಗೊಬ್ಬುರ ಸಿಗುತಿಲ್ಲವಾದ್ದರಿಂದ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಬೇಡಿಕೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು, ನಿರ್ಲಕ್ಷ್ಯ ವಹಿಸಿದರೆ ರಸ್ತೆ ತಡೆ ನಡೆಸಲಾಗುವುದೆಂದು ಅವರು ಎಚ್ಚರಿಸಿದರು.
Next Story




