ಯಾದಗಿರಿ | ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ರಾಣಿ ಯಶೋಧಾ ಆರ್.ಎ.ನಾಯಕ ಅವರಿಗೆ ಸನ್ಮಾನ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಶರಣಬಸವ ವಸತಿ ಪಬ್ಲಿಕ್ ಸ್ಕೂಲ್ ಮತ್ತು ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಸನಾಪುರ 2025-26ನೇ ಶೈಕ್ಷಣಿಕ ಸಾಲಿನ ಮೊದಲ ಪಾಲಕರ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಮಲ್ಲಿಕಾರ್ಜುನ ಪಾಟೀಲ ನಿವೃತ್ತ ಉಪನ್ಯಾಸಕರು ಡಯಟ್ ಕಲಬುರಗಿ ಮಾತನಾಡಿದರು.
ಸಂಸ್ಥೆಯಲ್ಲಿ 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡಿ ಕಾಲೇಜಿಗೆ ಪ್ರಥಮ ರ‍್ಯಾಂಕ್ ಪಡೆದು (ಶೇ.97.67) ಉತ್ತೀರ್ಣರಾದ ರಾಣಿ ಯಶೋಧಾ ನಾಯಕ ರಾಜಾ ಅಪ್ಪಾರಾವ್ ನಾಯಕ ಅವರು, 2024-25ನೇ ಸಾಲಿನ ಐಐಟಿಗಳಿಗೆ ಪ್ರವೇಶ ಪಡೆದುಕೊಳ್ಳುವುದಕ್ಕಾಗಿ ನಡೆಸುವ ರಾಷ್ಟ್ರಮಟ್ಟದ ಜೆಇಇ-ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶದಲ್ಲಿ 1,197ನೇ ರ‍್ಯಾಂಕ್ ಪಡೆದು ಐಐಟಿ ಕಲಿಕೆಗೆ ಅರ್ಹತೆ ಪಡೆದ ವಿದ್ಯಾರ್ಥಿನಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ವಿದ್ಯಾಭಂಡಾರಿ ಡಾ.ಶರಣಬಸಪ್ಪ ಅಪ್ಪಾ, ಉಪಾದ್ಯಾಕ್ಷರಾದ ನೀಲಮ್ಮತಾಯಿ ವ್ಹಿ ನಿಷ್ಠಿ, ಹಿರಿಯ ನ್ಯಾಯವಾದಿಗಳು ಹಾಗೂ ಸಮೂಹ ಸಂಸ್ಥೆಗಳ ಸಂಸ್ಥಾಪಕರು ಶರಣಬಸವಪ್ಪ ವ್ಹಿ ನಿಷ್ಠಿ, ಕಾರ್ಯದರ್ಶಿಗಳಾದ ಡಾ.ಶಾಂತಲಾ ಎಸ್ ನಿಷ್ಠಿ, ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ ಎಸ್ ನಿಷ್ಠಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.