ಯಾದಗಿರಿ | ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆ ಖಂಡಿಸಿ ಫೆ. 27ರಿಂದ ಬಿಜೆಪಿಯಿಂದ ರಾಜ್ಯಾದ್ಯಂತ ಜನಾಂದೋಲನ : ಮಹೇಂದ್ರ ನಾಯಕ

ಯಾದಗಿರಿ : ಫೆ.27 ರಿಂದ ಮಾ.4 ವರೆಗೆ ಸರ್ಕಾರದ ವಿರುದ್ದ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನದ ಸಂಯೋಜಕ ಮಹೇಂದ್ರ ನಾಯಕ ಹೇಳಿದರು.
ನಗರದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಜರುಗಿದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಹೋರಾಟದ ಪೂರ್ವ ಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ 14 ತಂಡಗಳಲ್ಲಿ ಫೆ.27ರಿಂದ ಮಾ.4ರವರೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶಾಸಕ ಪ್ರಭು ಚೌವ್ಹಾಣ್, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ,ಅವಣ್ಣ ಮ್ಯಾಳಿಕೇರಿ,ಇವರುಗಳ ನೇತೃತ್ವ 14 ತಂಡಗಳನ್ನು ರಚಿಸಲಾಗಿದೆ. ರಾಜ್ಯಾದ್ಯಂತ ಈ ತಂಡಗಳು ಫೆ.27ರಿಂದ ಮಾ.4 ವರೆಗೆ ಪ್ರವಾಸ ಮಾಡಲಿದ್ದು, ಸರ್ಕಾರದ ವಿರುದ್ಧ ಬೃಹತ್ ಆಂಧೋಲನ ನಡಯಲಿದೆ ಎಂದರು.
ಯಾದಗಿರಿ ಜಿಲ್ಲೆಯಲ್ಲಿ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರಕಾರ ವಿರುದ್ಧ ಈ ಜನಾಂದೋಲನದ ಹೋರಾಟ ವಿಭಿನ್ನವಾಗಿರಲಿದೆ. ಕಾರಣ ಎಲ್ಲ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದರು.
ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಮಾಜಿ ನಿಗಮದ ಅಧ್ಯಕ್ಷ ದೇವಿಂದ್ರನಾಥ ನಾದ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್.ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಹಳ್ಳಿಮನಿ,ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ ಮತ್ತು ಅಡಿವೆಪ್ಪ ಜಾಕ, ಜಿಲ್ಲಾ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ರಾಮಸಮುದ್ರ,ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಭೀಮಾಶಂಕರ ಬಿಲ್ಲವ್,ಮಹೀಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್, ವೆಂಕಟಪ್ಪ ಅವಂಗಪುರ,ಚಂದುಲಾಲ ಚೌದರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ ನಿರೂಪಿಸಿದರ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೋನಿಗೆರ ವಂದಿಸಿದರು.







