Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಆಯುಷ್ ಜಿಲ್ಲಾಸ್ಪತ್ರೆ...

Yadagiri | ಆಯುಷ್ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ: ಬಾಬುರಾವ್ ಕಾಡ್ಲೂರ

11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ23 Sept 2026 6:18 PM IST
share
Yadagiri | ಆಯುಷ್ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ: ಬಾಬುರಾವ್ ಕಾಡ್ಲೂರ

ಯಾದಗಿರಿ: ಆಯುರ್ವೇದ ನಮ್ಮ ದೇಶದ ಮೂಲ ಚಿಕಿತ್ಸಾ ಪದ್ಧತಿಯಾಗಿದ್ದು, ಅದರ ಸೇವೆಗಳು ಜಿಲ್ಲೆಯ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ತಲುಪಬೇಕು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಆಯುಷ್ ಜಿಲ್ಲಾಸ್ಪತ್ರೆ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಹೇಳಿದರು.

ನಗರದ ಹೊರವಲಯದಲ್ಲಿರುವ ನಿವೇದಿತಾ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಲೆನಾಡು ಭಾಗದಲ್ಲಿ ಅನೇಕರು ಕಡಿಮೆ ವೆಚ್ಚದಲ್ಲಿ ಆಯುಷ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಜನರು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸಾಂಗ್ಲಿ, ಮೀರಜ್, ಧರ್ಮಸ್ಥಳ, ಉಡುಪಿ, ಹಾಸನ ಹಾಗೂ ಕಾರವಾರಕ್ಕೆ ತೆರಳುತ್ತಿರುವುದನ್ನು ಗಮನಿಸಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಆಯುರ್ವೇದದ ಮಹತ್ವವೂ ಜನರಿಗೆ ಅರಿವಾಯಿತು ಎಂದು ಹೇಳಿದರು.

ನಗರದಲ್ಲಿ ಮತ್ತೊಂದು ಆಯುಷ್ ಚಿಕಿತ್ಸಾಲಯ ಆರಂಭಿಸಲು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಒದಗಿಸುವುದಾಗಿ ಅವರು ಭರವಸೆ ನೀಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಪತ್ರಕರ್ತ ಮಲ್ಲಿಕಾರ್ಜುನರೆಡ್ಡಿ ಹತ್ತಿಕುಣಿ, ನಿಸರ್ಗದೊಂದಿಗೆ ಹೊಂದಾಣಿಕೆಯ ಜೀವನಶೈಲಿ, ಆರೋಗ್ಯಕರ ಆಹಾರ ಪದ್ಧತಿ, ಯೋಗ, ಧ್ಯಾನ ಹಾಗೂ ರಚನಾತ್ಮಕ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಆಯುರ್ವೇದ ಚಿಕಿತ್ಸೆಯಿಂದ ದೇಹದ ಮೇಲೆ ದುಷ್ಪರಿಣಾಮ ಉಂಟಾಗುವುದಿಲ್ಲ. ಹಲವು ಕಾಯಿಲೆಗಳಿಗೆ ದೀರ್ಘಕಾಲಿಕ ಪರಿಹಾರ ದೊರೆಯುವ ಸಾಧ್ಯತೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಯುಷ್ ಇಲಾಖೆಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆಯುಷ್ ಅಧಿಕಾರಿ ಡಾ. ವಂದನಾ ಜೆ. ಗಾಳಿ ಮಾತನಾಡಿ, ಆಯುಷ್ ಇಲಾಖೆಯಿಂದ ಪ್ರತಿವರ್ಷ ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಆಯುರ್ವೇದದ ಕುರಿತು ತಜ್ಞರಿಂದ ಉಪನ್ಯಾಸಗಳನ್ನು ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ದೈನಂದಿನ ಜೀವನದಲ್ಲಿ ಸಿರಿಧಾನ್ಯಗಳು, ಹಸಿರು ತರಕಾರಿಗಳು, ಋತುವಿಗೆ ತಕ್ಕ ಹಣ್ಣುಗಳು ಹಾಗೂ ಮನೆಮದ್ದುಗಳನ್ನು ಬಳಸುವುದರಿಂದ ಅನೇಕ ಕಾಯಿಲೆಗಳಿಂದ ದೂರವಿರಬಹುದು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಆಯುರ್ವೇದ ಚಿಕಿತ್ಸೆಯ ವಿವಿಧ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಗಳು ನಡೆದವು.

ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮದುಸೂಧನ ದಾಸನ್, ಹಿರಿಯ ವೈದ್ಯಾಧಿಕಾರಿ ಡಾ. ಪ್ರಮೋದ ಕುಲಕರ್ಣಿ, ಪಿಎಸ್‌ಐ ಶಶಿಕಾಂತ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ರೋಹಿಣಿ ಸ್ವಾಗತಿಸಿ, ಸಂಗಮೇಶ ಕೆಂಭಾವಿ ಕಾರ್ಯಕ್ರಮ ನಿರೂಪಿಸಿದರು. ಡಾ. ಮಹೇಶ ಮಹಾಮನಿ ವಂದಿಸಿದರು.

Tags

hospitalyadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X