ಯಾದಗಿರಿ | ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಾವನಿಂದಲೇ ಅಳಿಯನ ಕೊಲೆ

ಯಾದಗಿರಿ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಳಿಯನನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್.ಕೆ) ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಲಕ್ಷ್ಮಣ ಚಿಗರಿಹಾಳ (28) ಹಾಗೂ ಆರೋಪಿಯನ್ನು ಮಾವ ಮಾನಪ್ಪ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್, ಡಿವೈಎಸ್ಪಿ ಜಾವೀದ್ ಇನಾಮದಾರ್ ಪಿಎಸೈ ಅಮೋಜ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಾನಪ್ಪನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Next Story