ಯಾದಗಿರಿ| ಡಿ.16ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಟಾಸ್ಕ್ ಫೋರ್ಸ್ ಸಮಿತಿ ಸಭೆ

ಯಾದಗಿರಿ: 2025ರ ಡಿಸೆಂಬರ್ 21 ರಿಂದ 24ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಡಿಸೆಂಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಯಾದಗಿರಿ ತಾಲೂಕಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರರಾದ ಸುರೇಶ ಅಂಕಲಗಿ ತಿಳಿಸಿದ್ದಾರೆ.
ಡಿಸೆಂಬರ್ 21ರಿಂದ 24ರವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನ ಸಂಬಂಧ ತಾಲೂಕು ಚಾಲನಾ ಸಮಿತಿ ಸಭೆ ಯಾದಗಿರಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳ ಉಪಸ್ಥಿತರಿರುವಂತೆ ಸೂಚಿಸಲಾಗಿದೆ.
Next Story





