ಯಾದಗಿರಿ | ಜಿಲ್ಲಾ ಬಾಲ ಭವನದಿಂದ ಮಕ್ಕಳ ಪ್ರತಿಭೆ ಗುರುತಿಸುವ ಕೆಲಸ ಶ್ಲಾಘನೀಯ : ಲಲಿತಾ ಅನಪೂರ

ಯಾದಗಿರಿ : ಜಿಲ್ಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸುವಂತಹ ಕೆಲಸ ಜಿಲ್ಲಾ ಬಾಲಭವನ ಮಾಡುತ್ತಿದೆ ಎಂದು ಯಾದಗಿರಿ ನಗರಸಭೆ ಅಧ್ಯಕ್ಷರಾದ ಲಲಿತಾ ಅನಪೂರ ಅವರು ಹೇಳಿದರು.
ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಗುರುತಿಸುವುದೆ ಬಾಲಭವನ, ವಿವಿಧ ಗ್ರಾಮಗಳಿಂದ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಸ್ವಾಗತಾರ್ಹ. ಇತ್ತಿಚೀನ ದಿನಗಳಲ್ಲಿ ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಗೆ ಒತ್ತುಕೊಡದೇ ಮೊಬೈಲ್ ಬಳಕೆಯಿಂದ ಮಕ್ಕಳು ತಮ್ಮ ಕ್ರೀಯಾ ಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾಾರೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕವೀರನಗೌಡ ಅವರು 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಿಮಿತ್ಯ ಬಾಲ ಭವನದ ವತಿಯಿಂದ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಿದರು.
ಯಾದಗಿರಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತ್ರಾಯ ಕರಡಿ ಮಾತನಾಡಿದರು.
ಸುಮಾರು 110ಕಿಂತ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಮೂಹ ನೃತ್ಯಗಳು, ವಿವಿಧ ಪ್ರದರ್ಶನ ಪ್ರದರ್ಶಿಸಿದರು.
ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಪ್ರೇಮ್ ಮೂರ್ತಿ, ಯಾದಗಿರಿ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಯಾದಗಿರಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಎನ್ ಕಟ್ಟಿಮನಿ, ಜಿಲ್ಲಾಾ ಕಾರ್ಯಕ್ರಮ ಸಂಯೋಜಕ ವೀರೇಶ ಕನ್ನೆಳ್ಳಿ ಅನಿಲಕುಮಾರ ಪಾಟೀಲ್, ಯಾದಗಿರಿ ಸರಕಾರಿ ಬಾಲಕಿಯರ ಬಾಲ ಮಂದಿರದ ನಾಗಮ್ಮ, ಯಾದಗಿರಿ ಜಿಲ್ಲಾ ಮಿಷನ್ ಸಂಯೋಜಕ ಯಲ್ಲಪ್ಪ ಕೆ, ಮಿಷನ್ ಶಕ್ತಿ ಯೋಜನೆ ಪ್ರಶಾಂತ ಕುಮಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.







