ಯಾದಗಿರಿ | ವೀರಶೈವ ಲಿಂಗಾಯತ ಸಮಾಜದ ವಾರ್ಷಿಕೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ : ಅನೇಕ ಜನ ಶರಣರು ಮಹಾತ್ಮರು ಉದ್ಧರಿಸಿರುವ ವೀರಶೈವ ಲಿಂಗಾಯತ ಸಮುದಾಯ ನಾಡಿನಲ್ಲಿ ಎಲ್ಲರಿಗೂ ಮಾದರಿಯಾಗಿರಲಿ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಎಮ್.ಬಿದರಿ ಮಾತನಾಡಿದರು.
ತಾಲೂಕಿನ ಲಕ್ಷ್ಮಪುರ -ಬಿಜಾಸಪುರ ಮಾರ್ಗ ಮಧ್ಯದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಶ್ರೀಗಿರಿ ಮಠದ ಆವರಣದಲ್ಲಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ನಡೆದ ದಿನದರ್ಶಿಕೆ ಹಾಗೂ ವೀರಶೈವ ಲಿಂಗಾಯತ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಸಮುದಾಯದ ಏಲಿಗೆಗೆ ಎಲ್ಲರ ಸಹಕಾರವೂ ಮುಖ್ಯವಾಗಿದೆ, ಅಲ್ಲದೆ ಮಕ್ಕಳಿಗೆ ಉತ್ತಮವಾದ ಸಂಸ್ಕಾರವನ್ನು ಕಲಿಸುವ ಮೂಲಕ ಮಾದರಿ ವ್ಯಕ್ತಿಗಳನ್ನಾಗಿ ಬೆಳೆಸುವ ಮೂಲಕ ವೀರಶೈವ ಲಿಂಗಾಯತ ಸಮುದಾಯ ಮಾದರಿ ಸಮುದಾಯವಾಗಿ ಬೆಳೆಯಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಗಿರಿ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ವಹಿಸಿದ್ದರು ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡೇಕಲ್ ದುರುದುಂಡೇಶ್ವರ ಮಠದ ಶಿವಕುಮಾರ ಮಹಾಸ್ವಾಮೀಜಿ ನೆರವೇರಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಡಾ.ಸುರೇಶ ಸಜ್ಜನ್, ಯಾದಗಿರಿಯ ಬಿಜೆಪಿ ಯುವ ಮುಖಂಡ ಮಹೇಶರಡ್ಡಿಗೌಡ ಮುದ್ನಾಳ, ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಸಮಾಜ ಸೇವರ ಶರಣು ನಾಯಕ ಬೈರಿಮರಡಿ, ಕರವೇ ಕಲ್ಯಾಣ ಕರ್ನಾಟಕ ಅಧ್ಯಕ್ಷ ಶಿವಮೋನಯ್ಯ ಎಲ್.ಡಿ.ನಾಯಕ, ಸೂಗುರೇಶ ವಾರದ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಹಿರೇಮಠ, ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷ ಚೇತನ್ ಪಪ್ಪ,ಯಾದಗಿರಿ ಜಿಲ್ಲಾಧ್ಯಕ್ಷ ಸಿದ್ದಲಿಂಗರೆಡ್ಡಿ,ತಾಲೂಕ ಅಧ್ಯಕ್ಷ ಮಲ್ಲು ಬಾದ್ಯಾಪುರ,ಭಾಗ್ಯಶ್ರೀ ಪಾಟೀಲ್,ಅಶ್ವಿನಿ ಬಿರಾದಾರ್, ಬಸನಗೌಡ ಕಮತಗಿ, ಅನಿಲ್ ದೇವರಡ್ಡಿ ರಾಯಚೂರ,ಸುರೇಶ ಕುಮಾರ ಪೀರಾಪುರ,ವಿಜಯಲಕ್ಷ್ಮಿ ಲಿಂಗಸೂಗುರ,ಶಿವಲೀಲಾ ಕವಡಿಮಟ್ಟಿ,ಶಿವಲೀಲಾ ನಾಲತವಾಡ,ಮಹೇಶರೆಡ್ಡಿ ಕಮತಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.







