Yadagiri | ವಿಶ್ವ ಹಿರಿಯ ನಾಗರಿಕರ ದಿನಾಚರಣೆ : 21 ಮಂದಿಗೆ ಸನ್ಮಾನ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2026 ಅನ್ನು ಗುರುವಾರ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಡಿ. ವಿಶ್ವನಾಥರೆಡ್ಡಿ ಮುದ್ದಾಣಾ ಸಭಾಭವನದಲ್ಲಿ ಆಚರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಕಾರ್ಯಕ್ರಮ ಉದ್ಘಾಟಿಸಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಯ 21 ಹಿರಿಯ ನಾಗರಿಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ 35 ಹಿರಿಯ ನಾಗರಿಕರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜನಗೌಡ ಪಾಟೀಲ್, ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ, ಬಾಲಾಜಿ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಜಿತ್‌ರಾಜ್ ದೊಖಾ, ಶಹಾಪುರ ತಾಲೂಕು ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಾಹೇನ ಜಾನಿ, ಸೂರ್ಯಕಾಂತ ಕರಡಳ್ಳಿ ಹಾಗೂ ನಿವೃತ್ತ ಸರ್ಕಾರಿ ನೌಕರ ಸಿ.ಎಂ. ಪಟ್ಟೇದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಶಾಂತಾ ಜಡಿ ಸ್ವಾಗತಿಸಿದರು. ನಿವೃತ್ತ ಸರ್ಕಾರಿ ನೌಕರ ಆಸೀಫ್ ಪಾಟೀಲ್ ನಿರೂಪಿಸಿದರು.
ಇಲಾಖೆಯ ಸಿಬ್ಬಂದಿ, ಪುನರ್ವಸತಿ ಕಾರ್ಯಕರ್ತರು, ವಿವಿಧ ಸಹಾಯವಾಣಿ ಸಿಬ್ಬಂದಿ, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಸಿಬ್ಬಂದಿ, ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






