ಯಾದಗಿರಿ | ಹಾವು ಕಡಿದು ಯುವಕ ಮೃತ್ಯು

ಯಾದಗಿರಿ: ಹಾವು ಕಡಿದು ಕನ್ನಡಪರ ಯುವ ಹೋರಾಟಗಾರನೊರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ನಿಂಗಣ್ಣ ಸಂಕ್ರಡ್ಡಿ ಎಂದು ಗುರುತಿಸಲಾಗಿದೆ.
ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಶನಿವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಮನೆಯಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ಕಲಬುರಗಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಯುವ ಕನ್ನಡ ಹೋರಾಟಗಾರ ಮೃತಪಟ್ಟ ಸುದ್ದಿ ತಿಳಿದು ಹಲವಾರು ಹೋರಾಟಗಾರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
Next Story





