Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ನೀರು ಬಿಡದಿದ್ದರೆ ನಾಳೆ ಯಾದಗಿರಿ ಬಂದ್ :...

ನೀರು ಬಿಡದಿದ್ದರೆ ನಾಳೆ ಯಾದಗಿರಿ ಬಂದ್ : ಮಾಜಿ ಸಚಿವ ರಾಜುಗೌಡ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ1 April 2025 6:11 PM IST
share
Photo of Protest

ಶಹಾಪುರ : ಇಂದು ಸಂಜೆಯೊಳಗೆ ನೀರು ಬಿಡುವ ನಿರ್ಧಾರ ಕೈಗೊಳ್ಳಬೇಕು, ಇಲ್ಲವಾದರೇ ನಾಳೆ ಯಾದಗಿರಿ ಬಂದ್‌ ಮಾಡಲಾಗುವುದು ಎಂದು ಮಾಜಿ ಸಚಿವ ರಾಜುಗೌಡ ಎಚ್ಚರಿಸಿದ್ದಾರೆ.

ಶಹಾಪುರ ಸಮೀಪದ ಭೀ.ಗುಡಿ ಸರ್ಕಲ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದ ಪಕ್ಷಾತೀತ ಹೊರಾಟದಲ್ಲಿ ಮಾತನಾಡಿದ ಅವರು, ನೀರು ಬೀಡುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಬೆಂಗಳೂರಿಗೆ ಹೋಗುವ ಅಗತ್ಯವಿಲ್ಲ, ಜಿಲ್ಲೆಯ ಮೂವರು, ನೆರೆಯ ಜೇರ್ವಗಿ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಿದರೇ ನೀರು ತಾನಾಗಿಯೇ ಹರಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮಾಜಿ ಅಧ್ಯಕ್ಷ ಅಮೀನ್ ರಡ್ಡಿ ಯಾಳಗಿ, ಹಾಲಿ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೆವಾಡಗಿ, ಕರವೇ ಅಧ್ಯಕ್ಷ ಟಿ.ಎನ್.ಭೀಮು ನಾಯಕ್, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ರೈತ ಮುಖಂಡ ಮಹೇಶ ಸುಬೇದಾರ ಸೇರಿದಂತೆಯೇ ಅನೇಕರು ಮಾತನಾಡಿದರು.

ಯಾದಗಿರಿ ಜಿಲ್ಲೆ, ದೇವದುರ್ಗ ಮತ್ತು ಜೇರ್ವಗಿ ತಾಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ‌ ರೈತರು ರಸ್ತೆ ತಡೆಯಲ್ಲಿ‌ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.

ಈ ಸಂದರ್ಭದಲ್ಲಿ ರಾಜ ಹಣಮಂತ ನಾಯಕ, ಬಸವರಾಜ ಸ್ಥಾವರಮಠ, ಬಸನಗೌಡ ಯಾಡಿಯಾಪುರ, ಯಲ್ಲಪ್ಪ ಕುರುಕುಂದಿ, ಸುರೇಶ್ ಸಜ್ಜನ್, ವೀರೆಶ ಸಾಹುಕಾರ ಹುಣಸಗಿ, ಶೋಭಾ ಬಾಣಿ, ಬಿ.ಎಮ್.ಹಳ್ಳಿಕೊಟಿ, ಸಿದ್ದನಗೌಡ ಕರಿಭಾವಿ, ಚಂದ್ರಶೇಖರ ಮಾಗನೂರು, ದೇವಿಂದ್ರಪ್ಪ ಕೊನೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಮೆಲಪ್ಪ ಗುಳುಗಿ ಹಾಗೂ ಪರುಶುರಾಮ ಕುರಕುಂದಿ, ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಜಾಕ,ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜ ಹನುಮಂತ ನಾಯಕ, ಸಿದ್ದಣ್ಣ ಗೌಡ, ಶಿವರಾಜ ದೆಶಮುಖ, ರಾಜಶೇಖರ್ ಗೂಗಲ್, ರಾಜಶೇಖರ್ ಕಾಡಂನೊರ, ಚಂದ್ರಶೇಖರ ಯಾಳಗಿ, ಶಹಾಪುರ ಗ್ರಾಮೀಣ ಮಂಡಲ ಅಧ್ಯಕ್ಷ ತಿರುಪತಿ ಹತಿಕಟಿಗಿ,ರಾಜುಗೌಡ ಉಕ್ಕಿನಾಳ, ಹಯಳ್ಳಪ್ಪ ಆಚಾರ್ಯ ಜೇವರ್ಗಿ, ಸೇರಿದಂತೆ ವಿವಿಧ ಸಂಘಟನೆಗಳು ಪದಾಧಿಕಾರಿಗಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X