ಯಾದಗಿರಿ | ಸರ್ವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು; ಡಾ.ಭೀಮಣ್ಣ ಮೇಟಿ

ಯಾದಗಿರಿ: ನಾಡಿಗೆ ಪ್ರಗತಿಗೆ ಪೂರಕವಾದ ಮತ್ತು ಸರ್ವ ಸಮುದಾಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಗತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಾ.ಭೀಮಣ್ಣ ಮೇಟಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ, ಕೈಗಾರಿಕೆ, ಶಿಕ್ಷಣ ಮತ್ತು ಆರೋಗ್ಯ ಹಾಗೂ ಗ್ರಾಮೀಣಾಭಿವೃದ್ಧಿಗೆ ಬಜೆಟ್‌ನಲ್ಲಿ ನಿರೀಕ್ಷೆಗೂ ಮೀರಿ ಒತ್ತು ನೀಡಿದ್ದಾರೆ. ಇದಲ್ಲದೇ ಎಐ ತಂತ್ರಜ್ಞಾನ ಬಳಸಿಕೊಂಡು ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಇದು ಬದಲಾವಣೆಗೆ ಮುನ್ನುಡಿ ಸಾಕ್ಷಿಯಾಗಿದೆ ಎಂದರು.
ಯಾದಗಿರಿ ಮತ್ತು ಶಹಾಪುರದಲ್ಲಿ ವಸತಿ ಶಾಲೆ ಹಾಗೂ ಯಾದಗಿರಿಯಲ್ಲಿ ನರ್ಸಿಂಗ್ ಕಾಲೇಜು ಸ್ಥಾಪನೆ ಮಾಡಲು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಇದಲ್ಲದೇ ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿ ಮಾಡಲು 2 ಸಾವಿರಕ್ಕೂ ಅಧಿಕ ಕೋಟಿ ಅನುದಾನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.
ಮಹಿಳಾ ಸಬಲೀಕರಣ ಮತ್ತು ಕೈಗಾರಿಕೆಗಳ ಪ್ರಗತಿಗೆ ಆಧ್ಯತೆ ನೀಡಿದ್ದಾರೆ. ಇದಲ್ಲದೇ ಯುವ ಸಬಲೀಕರಣಕ್ಕೂ ಒತ್ತು ನೀಡಿದ್ದಾರೆ. ಎಲ್ಲ ಸಮುದಾಯಗಳಿಗೆ ಬಜೆಟ್‌ನಲ್ಲಿ ಅವಕಾಶ ನೀಡುವ ಮೂಲಕ ಸಾಮಾಜಿಕ ನ್ಯಾಯದ ಹರಿಕಾರ ಎಂಬುದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ತಿಳಿಸಿದರು.







