Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಜಿಲ್ಲಾಧಿಕಾರಿ ರಾಹುಲ್...

Yadgiri | ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ʼಸಿಟಿ ರೌಂಡ್ʼ ಎಫೆಕ್ಟ್; ರಸ್ತೆ ಸ್ವಚ್ಛತೆಗೆ ಇಳಿದ ನಗರಸಭೆ

ವಾರ್ತಾಭಾರತಿವಾರ್ತಾಭಾರತಿ31 Aug 2026 9:29 PM IST
share
Yadgiri | ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ʼಸಿಟಿ ರೌಂಡ್ʼ ಎಫೆಕ್ಟ್; ರಸ್ತೆ ಸ್ವಚ್ಛತೆಗೆ ಇಳಿದ ನಗರಸಭೆ

ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ಕಳೆದ 15 ದಿನಗಳಿಂದ ಬೆಳಗ್ಗೆ ನಿರಂತರವಾಗಿ ನಗರದ ವಿವಿಧಡೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಸೌಲಭ್ಯಗಳಿಗೆ ಸೂಕ್ತ ಕ್ರಮ ಜರುಗಿಸುವಂತೆಯೇ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದ ಬೆನ್ನಲ್ಲೇ ನಗರಸಭೆ ಆಡಳಿತ ಕಾರ್ಯ ಚುರುಕುಗೊಳಿಸಿದೆ.

ನಗರದ ನೈರ್ಮಲ್ಯ ಮತ್ತು ಸೌಂದರ್ಯ ಕಾಪಾಡುವ ಉದ್ದೇಶದಿಂದ ಯಾದಗಿರಿ ನಗರಸಭೆಯು ಯಾಂತ್ರಿಕ ರಸ್ತೆ ಸ್ವಚ್ಛತಾ ಯಂತ್ರಗಳನ್ನು (ಸ್ವೀಪಿಂಗ್ ಮಷಿನ್) ರಸ್ತೆಗೆ ಇಳಿಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದೆ.

ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳ ರಸ್ತೆ ಬದಿಯಲ್ಲಿ ಸಂಗ್ರಹವಾಗಿದ್ದ ಮಣ್ಣು, ಧೂಳು ಮತ್ತು ಕಸವನ್ನು ಯಂತ್ರಗಳ ಮೂಲಕ ತೆರವುಗೊಳಿಸಲಾಗುತ್ತಿದೆ. ವಿಶೇಷವಾಗಿ ನಗರದ ಪ್ರಮುಖ ವಾಣಿಜ್ಯ ಹಾಗೂ ಸಂಚಾರ ಕೇಂದ್ರಗಳಾದ ಸುಭಾಷ್ ವೃತ್ತ ಮತ್ತು ಸ್ಟೇಷನ್ ರಸ್ತೆಯ ಇಕ್ಕೆಲಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದ್ದ ಮಣ್ಣನ್ನು ಯಾಂತ್ರಿಕವಾಗಿ ತೆರವುಗೊಳಿಸಿ ರಸ್ತೆ ಬದಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

ರಸ್ತೆ ಬದಿಯಲ್ಲಿ ಮಣ್ಣು ಸಂಗ್ರಹವಾಗಿದ್ದರಿಂದ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಧೂಳು ಏಳುತ್ತಿತ್ತು. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿತ್ತು. ಅಲ್ಲದೆ, ರಸ್ತೆ ಮೇಲೆ ಮಣ್ಣು ಹರಡಿಕೊಂಡಿದ್ದರಿಂದ ದ್ವಿಚಕ್ರ ವಾಹನ ಸವಾರರು ಜಾರಿಬೀಳುವ ಆತಂಕವೂ ಎದುರಾಗಿತ್ತು.

ನಗರಸಭೆಯ ಈ ಸ್ವಚ್ಛತಾ ಕಾರ್ಯದಿಂದ ಪ್ರಮುಖ ರಸ್ತೆಗಳಲ್ಲಿ ಮಣ್ಣು ಹಾಗೂ ಧೂಳಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತಿದೆ. ಯಾಂತ್ರಿಕ ಸ್ವಚ್ಛತಾ ಯಂತ್ರಗಳ ಬಳಕೆಯಿಂದ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದ ಮಣ್ಣನ್ನು ತೆರವುಗೊಳಿಸಲು ಸಾಧ್ಯವಾಗುತ್ತಿರುವುದರಿಂದ ನಗರದ ಸ್ವಚ್ಛತೆ ಮತ್ತು ಸೌಂದರ್ಯಕ್ಕೂ ಹೊಸ ಮೆರುಗು ದೊರೆಯುತ್ತಿದೆ. ಖುದ್ದಾಗಿ ಸ್ಥಳದಲ್ಲಿಯೇ ಇದ್ದು ಕೆಲಸ ಮಾಡಿಸುತ್ತಿರುವ ನಗರಸಭೆ ಪೌರಾಯುಕ್ತ ಉಮೇಶ್ ಚವಾಣ್ ಮಾತನಾಡಿ, ರಸ್ತೆ ಬದಿಯಲ್ಲಿ ಸಂಗ್ರಹವಾಗುವ ಮಣ್ಣನ್ನು ಯಾಂತ್ರಿಕವಾಗಿ ತೆರವುಗೊಳಿಸುವ ಮೂಲಕ ನಗರದ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಕಾಪಾಡಲು ಸಾಧ್ಯವಾಗಲಿದೆ. ಸಾರ್ವಜನಿಕರು ಮತ್ತು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಗರಸಭೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನಗರದ ಇತರ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿಯೂ ಇದೇ ರೀತಿಯ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಮಣ್ಣು ಸಂಗ್ರಹವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಸ್ವಚ್ಛತಾ ಕಾರ್ಯದಲ್ಲಿ ಪರಿಸರ ಅಭಿಯಂತರ ಪ್ರಶಾಂತ್ ಸೂರ್ಯವಂಶಿ, ಕಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಚವಾಣ್ ಹಾಗೂ ಸೂಪರ್‌ವೈಸರ್ ಅರುಣ್ ಕುಮಾರ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Tags

YadgirRoad Cleaning
share
ವಾರ್ತಾಭಾರತಿ
ವಾರ್ತಾಭಾರತಿ
Next Story
X