ಯಾದಗಿರಿ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ಯಾದಗಿರಿ: ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಶಿವರಾಜ(24) ಆತ್ಮಹತ್ಯೆ ಮಾಡಿಕೊಂಡ ರೈತ.
ಜಮೀನಿನಲ್ಲಿ ಹಾಕಲಾದ ಹತ್ತಿ ಬೀಜಗಳು ಮುಂಗಾರು ಮಳೆಯ ಅಭಾವದಿಂದ ಸರಿಯಾಗಿ ಮೊಳಕೆ ಬಂದಿಲ್ಲ. ಇದರಿಂದ ಮನನೊಂದು ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.
ಶಿವರಾಜ ಕೈಸಾಲ ಹಾಗೂ ಬ್ಯಾಂಕಿನಿಂದ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಘಟನೆ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story




