Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಕೆರೆಗಳಿಗೆ ನೀರು ಹರಿಸುವಂತೆ...

Yadagiri | ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಬೀಗ ಹಾಕಲು ರೈತ ಸಂಘದಿಂದ ಯತ್ನ

ವಾರ್ತಾಭಾರತಿವಾರ್ತಾಭಾರತಿ18 Sept 2026 8:35 PM IST
share
Yadagiri | ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಬೀಗ ಹಾಕಲು ರೈತ ಸಂಘದಿಂದ ಯತ್ನ

ಯಾದಗಿರಿ, ಸೆ.19: ತಾಲೂಕಿನ ಮಲ್ಕಪ್ಪನಹಳ್ಳಿ ಹಾಗೂ ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ಗ್ರಾಮಗಳ ಕೆರೆಗಳನ್ನು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಸರಪಳಿಯಿಂದ ಬೀಗ ಹಾಕಲು ಯತ್ನಿಸಿದ ಘಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಾಗೂ ಸಂಘಟನೆಯ ಮುಖಂಡರು ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಬೇಡಿಕೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಖಂಡರೊಬ್ಬರು ಸರಪಳಿ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದರು.

ಈ ವೇಳೆ ರೈತ ಮುಖಂಡರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ನೀರಿಲ್ಲದೆ ಬೆಳೆಗಳು ಒಣಗುತ್ತಿವೆ, ಜಾನುವಾರುಗಳು ಸಾವನ್ನಪ್ಪುತ್ತಿವೆ. ರೈತರ ಬೆಳೆಗಳನ್ನು ಉಳಿಸಲು ತಕ್ಷಣ ನೀರು ಹರಿಸಬೇಕು” ಎಂದು ಆಗ್ರಹಿಸಿದರು.

ರೈತ ಸಂಘದ ಮುಖಂಡರು ಮಾತನಾಡಿ, ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕಾಗಿ ಹೋರಾಟ ನಡೆಸಿದ್ದ ರೈತರು ಈಗ ಬೆಳೆ ಉಳಿಸಿಕೊಳ್ಳಲು ನೀರಿಗಾಗಿ ಹೋರಾಡುವ ಪರಿಸ್ಥಿತಿ ಬಂದಿದೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ನೀರಿದ್ದು, ಸನ್ನತಿ ಬ್ಯಾರೇಜ್‌ನಿಂದ ಕನಿಷ್ಠ 0.2 ಟಿಎಂಸಿ ನೀರು ಬಿಡುಗಡೆ ಮಾಡಿದರೆ ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನ ಸುಮಾರು 35 ಕೆರೆಗಳು ತುಂಬುತ್ತವೆ ಎಂದು ತಿಳಿಸಿದರು.

ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್ ಅವರೊಂದಿಗೆ ಆಗಮಿಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ರೈತರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು.

ಸನ್ನತಿ ಬ್ಯಾರೇಜ್‌ನ ಒಟ್ಟು ಸಾಮರ್ಥ್ಯ 2 ಟಿಎಂಸಿ ಆಗಿದ್ದು, ಪ್ರಸ್ತುತ 1.4 ಟಿಎಂಸಿ ನೀರು ಲಭ್ಯವಿದೆ. ಯಾದಗಿರಿ ಬ್ಯಾರೇಜ್‌ನಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಯಾದಗಿರಿ, ಶಹಾಪುರ ನಗರಗಳು, ಗುರುಮಠಕಲ್ ಪಟ್ಟಣ ಸೇರಿದಂತೆ 36 ಗ್ರಾಮಗಳಿಗೆ ಕುಡಿಯುವ ನೀರು ಸನ್ನತಿ ಬ್ಯಾರೇಜ್‌ನಿಂದ ಪೂರೈಕೆಯಾಗುತ್ತಿದ್ದು, ಜಿಲ್ಲೆಯ ಸುಮಾರು 35 ಶೇಕಡಾ ಕುಡಿಯುವ ನೀರಿನ ಅವಲಂಬನೆ ಇದೇ ಬ್ಯಾರೇಜ್ ಮೇಲಿರುವುದರಿಂದ ಜುಲೈ ಅಂತ್ಯದವರೆಗೆ ಕುಡಿಯುವ ನೀರು ಪೂರೈಕೆಯನ್ನು ಗಮನದಲ್ಲಿಟ್ಟುಕೊಂಡು ನೀರಿನ ನಿರ್ವಹಣೆ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರತಿಭಟನೆಯಲ್ಲಿ ಮಹೇಶ್ ಗೌಡ ಸುಬೇದಾರ್, ವಿಜಯಕುಮಾರ್ ಮೂಷ್ಟುರು, ಮೌನೇಶ ಸಗರ್, ರಾಕೇಶ್ ಗೌಡ ಕಪೂರ್, ಈಶಪ್ಪ ಹೂಗಾರ, ಭೀಮರಾಯ ಕಪೂರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

farmersYadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X