Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕುಡಿಯುವ ನೀರಿಗಾಗಿ ತಾಲೂಕು...

ಯಾದಗಿರಿ | ಕುಡಿಯುವ ನೀರಿಗಾಗಿ ತಾಲೂಕು ಪಂಚಾಯತ್‌ ಮುಂದೆ ರೈತ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 March 2025 4:24 PM IST
share
Photo of Letter of appeal

ವಡಗೇರಾ : ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕ ಹಾಗೂ ಕೊಳವೆ ಬಾವಿಗಳ ದುರಸ್ತಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ್ ಮೇಟಿ ಬಣದ ತಾಲೂಕು ಘಟಕದ ವತಿಯಿಂದ ಮಂಗಳವಾರದಂದು ತಾಲೂಕು ಪಂಚಾಯತ್‌ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕುಬ ಕಟ್ಟಿಮನಿ ಭಾಗವಹಿಸಿ ಮಾತನಾಡಿದರು. ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ ಪಟ್ಟಣದ ವಾರ್ಡ್ 1 ಮತ್ತು 3 ರಲ್ಲಿ ಹಾಗೂ ಇನ್ನಿತರ ಬಡಾವಣೆಗಳಲ್ಲಿ ಸುಮಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ನಮ್ಮ ರೈತ ಸಂಘದ ವತಿಯಿಂದ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ, ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಕೂಡಲೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕಾ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಹಕಾರ ಹೆಚ್ಚಾಗಿದೆ. ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ಮಾಡಿ ತಪ್ಪು ಮಾಹಿತಿ ನಿಡುತ್ತಿರುವುದು ಸರಿಯಲ್ಲ. ದಿನನಿತ್ಯ ಯುವಕರು ವೃದ್ಧರು ಮಕ್ಕಳು ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯ ಹತ್ತಿರವಿರುವ ಮತ್ತು ಮುಸ್ಲಿಂ ಸಮಾಜದ ಸ್ಮಶಾನದಲ್ಲಿರುವ ಸಮಾಜದ ಸ್ಮಶಾನದಲ್ಲಿರುವ ಬೋರ್ವೆಲ್ ಗಳ ನೀರು ತಂದು ಕುಡಿಯುತ್ತಿದ್ದಾರೆ. ಹಗಲು ರಾತ್ರಿ ಅನ್ನದೆ ಸೈಕಲ್ ಗಾಡಿಗಳ ಮೇಲೆ ನೀರು ತರುವುದೇ ಒಂದು ಕೆಲಸವಾಗಿದೆ. ಇಷ್ಟೆಲ್ಲ ನೀರಿನ ಸಮಸ್ಯೆ ಇದ್ದರೂ, ಪಿಡಿಓ ಮಾತ್ರ ಇದಕ್ಕೂ ನನಗೂ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು ಕೇಟ್ಟು ನಿಂತಿದ್ದು ಅವುಗಳ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು.

ಪಟ್ಟಣದಲ್ಲಿ ಕೆಟ್ಟು ನಿಂತಿರುವ ಕೊಳೆಯ ಬಾವಿ ಮತ್ತು ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ದೊರಸ್ತಿಗೊಳಿಸಬೇಕು. ಕಂದಳಿ ಗ್ರಾಮದ ಭೀಮಾ ನದಿಯಿಂದ ಸರಬರಾಜು ಆಗುವ ನೀರು ಸಂಪೂರ್ಣ ಕಲುಷಿತವಾಗಿವೆ, ಆ ನೀರು ಕುಡಿಯಲು ಯೋಗ್ಯವಿಲ್ಲ. ಅಲ್ಲಿಂದ ಬರುವ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡಬೇಕು. ತುಮಕೂರು ಗ್ರಾಮದ ಕೃಷ್ಣಾ ನದಿಯಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತಿ ಇಓ ಮುಖಾಂತರ ಜಿಲ್ಲಾ ಪಂಚಾಯಿತಿ ಸಿಇಓ ರವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ನಿರತ ಸ್ಥಳಕ್ಕೆ ತಾಲೂಕು ಪಂಚಾಯತ್‌ ಇಓ ಮಲ್ಲಿಕಾರ್ಜುನ ಸಂಗ್ವಾರ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಯನ್ನು 15 ದಿನದ ಒಳಗಾಗಿ ಬಗೆಹರಿಸುವ ಭರವಸೆ ನೀಡಿದರು.

ಈ ಪ್ರತಿಭಟನೆಯಲ್ಲಿ ತಾಲೂಕು ಗೌರವಾಧ್ಯಕ್ಷ ಶರಣು ಜಡಿ, ಸಾಬಣ್ಣ ತೇಕರಾಳ, ನಾಗರಾಜ ಸ್ವಾಮಿ, ಕೃಷ್ಣಾ, ಸಿದ್ದು, ವೆಂಕಟೇಶ್ ಇಟಗಿ, ವೀರೇಶ್ ಗೌಡ, ಮಲ್ಲಿಕಾರ್ಜುನ್ ವಿಶ್ವಕರ್ಮ, ದೇವಪ್ಪ ಹೊರಟೂರ, ಅಶೋಕ್, ದರ್ಶನ್ ಮುಸ್ತಾಜೀರ, ಬಾಲಪ್ಪ, ಸಾಬಯ್ಯ, ದೇವಪ್ಪ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X